ಪಾಟ್ನಾ: ಬಿಹಾರ ವಿಧಾನಸಭಾ ಕ್ಷೇತ್ರದ ಮೊದಲ ಹಂತದ ಮತದಾನ ಆರಂಭವಾಗಿದ್ದು, ಕೋವಿಡ್ಗೆ ಸಂಬಂಧಿಸಿದ ನಿಯಮಗಳನ್ನು ಅನುಸರಿಸಲಾಗುತ್ತಿದೆ.
ಹಿಸುವಾ ವಿಧಾನಸಭಾ ಕ್ಷೇತ್ರದ ಫುಲ್ಮಾ ಗ್ರಾಮದಲ್ಲಿ ಬಿಜೆಪಿ ಮತಗಟ್ಟೆ ಅಧಿಕಾರಿ ಕೃಷ್ಣ ಕುಮಾರ್ ಸಿಂಗ್ ಮತಗಟ್ಟೆಯಲ್ಲಿಯೇ ಮೃತಪಟ್ಟಿದ್ದಾರೆ.
ಕೃಷ್ಣ ಕುಮಾರ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದಾಗ ಮೃತಪಟ್ಟಿರುವುದು ದೃಢಪಟ್ಟಿದೆ ಎನ್ನಲಾಗಿದೆ.