Saturday, November 8, 2025

ಬಿಹಾರ ವಿಧಾನಸಭಾ ಚುನಾವಣೆ ಘೋಷಣೆಗೂ ಮುನ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಜೆಪಿ ಪಕ್ಷವು ಹೊಸ ರಾಷ್ಟ್ರೀಯ ಅಧ್ಯಕ್ಷರನ್ನು ನೇಮಿಸಲು ಸಿದ್ಧತೆ ನಡೆಸುತ್ತಿದ್ದು, ಬಿಹಾರ ವಿಧಾನಸಭಾ ಚುನಾವಣೆ ಘೋಷಣೆಗೂ ಮುನ್ನ ನಿರ್ಧಾರ ಹೊರಬೀಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

ಸೆ.9 ರಂದು ಉಪ ರಾಷ್ಟ್ರಪತಿ ಚುನಾವಣೆಯ ನಂತರ ಸಮಾಲೋಚನಾ ಪ್ರಕ್ರಿಯೆಯು ಪುನರಾರಂಭಗೊಳ್ಳಲಿದ್ದು, ನಂತರ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡುವ ವೇಳಾಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆ ಇದೆ.

ರಾಷ್ಟ್ರೀಯ ಅಧ್ಯಕ್ಷರನ್ನು ಅಂತಿಮಗೊಳಿಸುವ ಮೊದಲು, ಉತ್ತರ ಪ್ರದೇಶ, ಗುಜರಾತ್ ಮತ್ತು ಕರ್ನಾಟಕದಂತಹ ಪ್ರಮುಖ ರಾಜ್ಯಗಳಲ್ಲಿ ಹೊಸ ರಾಜ್ಯ ಅಧ್ಯಕ್ಷರನ್ನು ನೇಮಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

error: Content is protected !!