ಪಾಟ್ನಾ: ಬಹು ನಿರೀಕ್ಷಿತ ಬಿಹಾರ ವಿಧಾನಸಭೆ ಚುನಾವಣೆಯ ಪ್ರಥಮ ಹಂತದ ಮತದಾನ ನಾಳೆ ನಡೆಯಲಿದ್ದು, 71 ಕ್ಷೇತ್ರಗಳಲ್ಲಿ 2 ಕೋಟಿಗೂ ಅಧಿಕ ಮಂದಿ ಮತ ಚಲಾಯಿಸುವ ಮೂಲಕ 1,066 ಅಭ್ಯರ್ಥಿಗಳ ಹಣೆಬರಹ ನಿರ್ಧರಿಸಲಿದ್ದಾರೆ.
ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮತಗಟ್ಟೆ, ಮತದಾನ ಕೇಂದ್ರಗಳಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಮತದಾನ ಕೇಂದ್ರಗಳನ್ನು ಹೆಚ್ಚಿಸಲಾಗಿದೆ ಎಂದು ವರದಿ ಹೇಳಿದೆ.
ಈಗಾಗಲೇ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗ ನಿಯಮಾವಳಿ ಪ್ರಕಟಿಸಿದ್ದು, ಅದರಂತೆ ಕೋವಿಡ್ 19 ಮುಂಜಾಗ್ರತಾ ಕ್ರಮದಂತೆ ಮತದಾನ ನಡೆಯಲಿದೆ.