Wednesday, February 8, 2023

Latest Posts

ಬೀದರ್ ನಲ್ಲಿ ಬಿ.ಎಸ್ಸಿ ನರ್ಸಿಂಗ್ ಕೋರ್ಸ್ ಆರಂಭಕ್ಕೆ ರಾಜ್ಯದಿಂದ ಆದೇಶ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಸರ್ಕಾರವು ಕರ್ನಾಟಕದ ಜನತೆಗೆ ಗುಡ್ ನ್ಯೂಸ್ ನೀಡಿದ್ದು, ಪ್ರಸಕ್ತ 2022-23ನೇ ಸಾಲಿನಿಂದಲೇ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 60 ಸೀಟುಗಳೊಂದಿಗೆ ಬಿ.ಎಸ್ಸಿ ನರ್ಸಿಂಗ್ ಕೋರ್ಸ್ ಆರಂಭಿಸಲು ಆದೇಶ ಹೊರಡಿಸಿದೆ.

ಈ ಬಗ್ಗೆ ರಾಜ್ಯದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಟ್ವೀಟ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಟ್ವೀಟ್ ಮಾಡಿರುವ ಸುಧಾಕರ್ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮತ್ತೊಂದು ಕೊಡುಗೆ. ಯಾದಗಿರಿಯಲ್ಲಿ 150 ಎಂಬಿಬಿಎಸ್ ಸೀಟುಗಳೊಂದಿಗೆ ನೂತನ ಸರ್ಕಾರಿ ಮೆಡಿಕಲ್ ಕಾಲೇಜಿನ ಆರಂಭಕ್ಕೆ ಅನುಮತಿ ದೊರೆತಿರುವ ಬೆನ್ನಲ್ಲೇ ಈಗ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 60 ಸೀಟುಗಳೊಂದಿಗೆ ಬಿ.ಎಸ್ಸಿ. ನರ್ಸಿಂಗ್ ಕೋರ್ಸ್ ಆರಂಭಿಸಲು ಆರೋಗ್ಯ ವಿವಿಯಿಂದ ಅನುಮತಿ ದೊರೆತಿದೆ ಎಂದು ಟ್ವೀಟ್ ಮಾಡಿದ್ದಾರೆ.

ಬಿ.ಎಸ್ಸಿ. ನರ್ಸಿಂಗ್ ಕೋರ್ಸ್ ಗಳ ಸಂಯೋಜನೆಗೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ಮಂಜೂರಾತಿ ಪಡೆಯಬೇಕು. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ನಿಗದಿಪಡಿಸಿರುವ ಪರಿನಿಯಮಾವಳಗಳನ್ನು ಕಟ್ಟುನಿಟ್ಟಾಗಿ ಸಾಲಸಬೇಕು ಹಾಗೂ ವಿವಿ ನಿಗದಿಪಡಿಸಿರುವ ಮೂಲಭೂತ ಸೌಲಭ್ಯಗಳನ್ನು ಕಡ್ಡಾಯವಾಗಿ ಹೊಂದಬೇಕು. ರಾಜ್ಯ ಸರ್ಕಾರ ಮತ್ತು ವಿಶ್ವವಿದ್ಯಾಲಯವು ಕಾಲಕಾಲಕ್ಕೆ ನೀಡುವ ಸೂಚನೆ ಹಾಗೂ ಆದೇಶಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!