Friday, August 19, 2022

Latest Posts

ಬೀದರ: ದಿನದ 24 ತಾಸು ವಿದ್ಯುತ್ ನೀಡುವಂತೆ ಒತ್ತಾಯಿಸಿ ಜೆಸ್ಕಾಂ ಕಚೇರಿಗೆ ಮುತ್ತಿಗೆ

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯ ಸರ್ಕಾರ ಭರವಸೆ ನೀಡಿದಂತೆ ದಿನದ 24 ತಾಸು ರೈತರಿಗೆ ನಿರಂತರ ವಿದ್ಯುತ್ ಸರಬರಾಜು ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬೀದರ ಜಿಲ್ಲಾ ಘಟಕದಿಂದ ಬೀದರ ನಗರದ ಜೇಸ್ಕಾಂ ಇ.ಇ. ಕಚೇರಿಗೆ ಬೀಗ ಜಡೆದು ಮುತ್ತಿಗೆ ಹಾಕಿ, ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ರೈತ ಹಿರಿಯ ಮುಖಂಡರೊಬ್ಬರು, ರಾಜ್ಯ ಸರ್ಕಾರ ರೈತರಿಗೆ ಮಾತು ಕೊಟ್ಟಂತೆ ದಿನದ 7 ಗಂಟೆ ತ್ರಿಫೇಸ್ ವಿದ್ಯುತ್ ನೀಡುತ್ತದೆ ಎಂದು ಆಶ್ವಾಸನೆ ನೀಡಿದಂತೆ ಬೀದರ ಜಿಲ್ಲೆಯ ರೈತರಿಗೆ 7 ಗಂಟೆಗಳಲ್ಲಿ ಎಷ್ಟು ಸಲ ವಿದ್ಯುತ್ ಕಣ್ಣು ಮುಚ್ಚಾಲೆ ಆಟವಾಡುತ್ತದೆ ಎಂಬುವುದು ತಿಳಿಯುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬೀದರ ಜಿಲ್ಲಾ ಘಟಕದ ಅಧ್ಯಕ್ಷರಾದ ಸಿದ್ರಾಮಪ್ಪ ಆಣದೂರೆ, ಕಾರ್ಯಾಧ್ಯಕ್ಷರಾದ ಶ್ರೀಮಂತ ಬಿರಾದಾರ, ಪ್ರಧಾನ ಕಾರ್ಯದರ್ಶಿ ದಯಾನಂದ ಸ್ವಾಮಿ ಅವರು ಸೇರಿದಂತೆ ಅನೇಕ ರೈತರು ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!