Wednesday, July 6, 2022

Latest Posts

ಬೀದರ ಪತ್ರಕರ್ತರಿಗೆ ಕೋವಿಡ್-19 ತಪಾಸಣೆ

ಬೀದರ್: ಕೊರೋನಾ ಸೋಂಕಿನ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ನಿರತವಾಗಿರುವ ಮಾಧ್ಯಮದವರಿಗೆ ರಾಜ್ಯಾದ್ಯಂತ ಕೊರೋನಾ ತಪಾಸಣೆ ಮಾಡಲಾಗುತ್ತಿದೆ.

ಕೊರೋನಾ ಕುರಿತಾಗಿ ವರದಿ ನೀಡುತ್ತಿರುವ ಟಿವಿ ಹಾಗೂ ಮುದ್ರಣ ಮಾಧ್ಯಮದ ವರದಿಗಾರರಿಗೆ ಮತ್ತು ಛಾಯಗ್ರಾಹಕರಿಗೆ ಕೊರೋನಾ ಪರೀಕ್ಷೆ ನಡೆಯುತ್ತಿದೆ.

 

ಏ.28ರ ಬೆಳಗ್ಗೆ 10 ರಿಂದ ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿ ಆವರಣದಲ್ಲಿನ ಸಭಾಂಗಣದಲ್ಲಿ ಬೀದರ ಜಿಲ್ಲೆಯ ಪತ್ರಕರ್ತರಿಗೆ ಕೋವಿಡ್-19ರ ತಪಾಸಣೆ ನಡೆಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ವಿ.ಜಿ.ರೆಡ್ಡಿ ಮತ್ತು ಜಿಲ್ಲಾ ಕಣ್ಗಾವಲು ಅಧಿಕಾರಿ ಡಾ.ಕೃಷ್ಣಾ ರೆಡ್ಡಿ ಅವರ ಮಾರ್ಗದರ್ಶನದಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜಿನ ಸಮುದಾಯ ವೈದ್ಯ ಶಾಸ್ತ್ರ ವಿಭಾಗದ ಪ್ರಯೋಗಾಲಯ ತಂತ್ರಜ್ಞರಾದ ಡಾ.ರಾಜಕುಮಾರ ಹೆಬ್ಬಾಳೆ ಮತ್ತು ದತ್ತಾತ್ರಿ ಅವರು ಪತ್ರಕರ್ತರ ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಿದರು.

ಏ.27ರಂದು ಕೂಡ ಜಿಲ್ಲಾಸ್ಪತೆಯಲ್ಲಿ ಕೆಲ ಜನ ಪತ್ರಕರ್ತರಿಗೆ ಕೋವಿಡ್-19 ತಪಾಸಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ಆಕಾಶವಾಣಿ ಮತ್ತು ದೂರದರ್ಶನದ ಜಿಲ್ಲಾ ವರದಿಗಾರರಾದ ಕೆ.ಎಲ್.ಚಂದನ ಹಾಗೂ ಇತರರು ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss