Monday, July 4, 2022

Latest Posts

ಬುದ್ದಿ ಹೇಳಲು ತೆರಳಿದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ: 7 ಮಂದಿ ಪೊಲೀಸ್ ವಶ

ಮಡಿಕೇರಿ: ಲಾಕ್‌ಡೌನ್ ಉಲ್ಲಂಘನೆ ಮಾಡಿ ಮೈದಾನದಲ್ಲಿ ವಾಲಿಬಾಲ್ ಆಟವಾಡುತ್ತಿದ್ದ ಸಂದರ್ಭ ಬುದ್ದಿ ಹೇಳಲು ತೆರಳಿದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 7 ಮಂದಿಯನ್ನು ವಶಕ್ಕೆ ಪಡೆದಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಹುಂಡಿ ಗ್ರಾಮದ ನಾಸಿರ್, ಸಿರಾಜ್, ಹುಸೇನ್ ಯಜಾಜ್ ಹಾಗೂ ಇತರರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಹುಂಡಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಸಮೀಪದಲ್ಲಿರುವ ಮೈದಾನವೊಂದರಲ್ಲಿ ಲಾಕ್ ಡೌನ್ ಉಲ್ಲಂಘನೆ ಮಾಡಿ ಯುವಕರ ಗುಂಪೊಂದು ಸೋಮವಾರ ಬೆಳಗಿನಿಂದಲೇ ವಾಲಿಬಾಲ್ ಆಟವಾಡುತ್ತಿದ್ದರೆನ್ನಲಾಗಿದೆ. ಈ ಬಗ್ಗೆ ಚೆನ್ನಯ್ಯನಕೋಟೆ ಉಪ ಪೊಲೀಸ್ ಠಾಣೆಯ ಮುಖ್ಯ ಪೇದೆಯೊಬ್ಬರು ಸ್ಥಳಕ್ಕೆ ತೆರಳಿ ಕೊರೋನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮಕೈಗೊಳ್ಳುವಂತೆ ಹಾಗೂ ಕಾನೂನು ಉಲ್ಲಂಘಿಸದಂತೆ ಯುವಕರಿಗೆ ಬುದ್ಧಿ ಮಾತುಗಳನ್ನು ಹೇಳಿದ್ದರು. ಆದರೂ ಕೂಡ ಕಾನೂನು ಉಲ್ಲಂಘನೆ ಮಾಡಿ ಯುವಕರ ಗುಂಪು ಸಂಜೆಯ ಸಮಯದಲ್ಲೂ ವಾಲಿಬಾಲ್ ಆಡುತ್ತಿರುವ ಬಗ್ಗೆ ಪೊಲೀಸರಿಗೆ ದೂರು ಬಂದಿತ್ತು. ದೂರಿನ ಅನ್ವಯ ಸ್ಥಳಕ್ಕೆ ತೆರಳಿದ ಪೊಲೀಸರು ಲಾಕ್ ಡೌನ್ ಹಿನ್ನೆಲೆಯಲ್ಲಿ ಮನೆಯಿಂದ ಹೊರಗೆ ಬರದಂತೆ ಹಾಗೂ ಗುಂಪು ಸೇರದಂತೆ ಎಚ್ಚರಿಕೆ ನೀಡಿದರು. ಇದರಿಂದ ಆಕ್ರೋಶಗೊಂಡ ನಾಸಿರ್ ಹಾಗೂ ಇತರರು ಪೊಲೀಸ್ ಸಿಬ್ಬಂದಿಗಳಾದ ಸ್ವಾಮಿ ಹಾಗೂ ಮಲ್ಲಪ್ಪ ಎಂಬವರ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಪೊಲೀಸರನ್ನು ತಳ್ಳಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಸ್ಥಳಕ್ಕೆ ಸಿದ್ದಾಪುರ ಠಾಣಾಧಿಕಾರಿ ಭೋಜಪ್ಪ ಅವರು ಭೇಟಿ ನೀಡಿದ್ದರಾದರೂ, ಆ ವೇಳೆಗಾಗಲೇ ಆರೋಪಿಗಳು ಪರಾರಿಯಾಗಿದ್ದರು. ಆದರೆ ಮಂಗಳವಾರ 7 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss