ಬೆಂಗಳೂರು: ದೇಶದಲ್ಲಿ ಕೊರೋನಾವೈರಸ್ ಕುರರಿತಾದ ಪ್ರಕರಣಗಳು ಬೆಳಕಿಗೆ ಬರುತ್ತಿದಂತೆಯೇ ಬೆಂಗಳೂರಿನಲ್ಲಿ ಮತ್ತೆ ಮೂವರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.
ಬೆಂಗಳೂರಿನಲ್ಲಿ ಸೋಮವಾರ ಒಂದು ಪ್ರಕರಣ ದೃಢವಾಗಿತ್ತು, ಆದರೆ ಇದೀಗ ಮೂವರಿಗೆ ಕೋವಿಡ್-19 ಖಚಿತವಾಗಿದೆ. ಕುಟುಂಬಸ್ಥರನ್ನು ಪ್ರತ್ಯೇಕ ಕೊಠಡಿಯಲ್ಲಿರಿಸಿ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ ಎಂದು ಆರೋಗ್ಯ ಸಚಿವ ಶ್ರೀ ರಾಮುಲು ಟ್ವೀಟ್ ಮಾಡಿದ್ದಾರೆ.
ಕರ್ನಾಟಕದಲ್ಲಿ ಇದುವರೆಗೆ 4 ವ್ಯಕ್ತಿಗಳಲ್ಲಿ #COVID19 ಸೋಂಕು ದೃಢಪಟ್ಟಿದ್ದು, ಅವರನ್ನು ಹಾಗೂ ಅವರ ಕುಟುಂಬ ಸದಸ್ಯರನ್ನು ಪ್ರತ್ಯೇಕವಾಗಿರಿಸಿ ಅವರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ. ನಾಗರಿಕರು ಮುಂಜಾಗೃತ ಕ್ರಮ ವಹಿಸಿ ಸೋಂಕು ಹರಡದಂತೆ ಸಹಕರಿಸಬೇಕು ಎಂದು ಕೋರುತ್ತೇನೆ #CoronavirusOutbreak
— B Sriramulu (@sriramulubjp) March 10, 2020