Monday, August 15, 2022

Latest Posts

ಬೆಂಗಳೂರಿನಲ್ಲಿ ಪ್ರಳಯಾಂತಕ ಮಳೆ: ಹಾನಿಗೊಳಗಾದ ಪ್ರದೇಶಗಳಿಗೆ ಧಾವಿಸಿದ ಸಚಿವ ಆರ್. ಅಶೋಕ್

ಮಂಗಳೂರು: ರಾಜ್ಯ ರಾಜಧಾನಿಯಲ್ಲಿ ಪ್ರಳಯಾಂತಕ ಮಳೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಹಾನಿಗೊಳಗಾದ ಪ್ರದೇಶಗಳಿಗೆ ಶುಕ್ರವಾರ ರಾತ್ರಿ ಧಾವಿಸಿದ ಕಂದಾಯ ಸಚಿವ ಆರ್. ಅಶೋಕ್, ಪರಿಹಾರ ಕಾರ್ಯಗಳಿಗೆ ಮಾರ್ಗದರ್ಶನ ನೀಡಿದ್ದಾರೆ.
ಜಯನಗರ ಮತ್ತು ಬಸವನಗುಡಿ ವ್ಯಾಪ್ತಿಯಲ್ಲಿ ಮಳೆಯಿಂದಾಗಿ ಅಪಾರ ಹಾನಿ ಉಂಟಾಗಿದ್ದು, ರಾಜಕಾಲುವೆ ಬ್ಲಾಕ್ ಮಾಡಿದ್ದರಿಂದ ಸಮಸ್ಯೆಯಾಗಿದೆ. ಬ್ಲಾಕೇಜ್ ತೆರವಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ಊಟ, ವಸತಿ ವ್ಯವಸ್ಥೆ
ಸಂತ್ರಸ್ತ ಮನೆಗಳ ಕುಟುಂಬಗಳಿಗೆ ಊಟ, ವಸತಿ ವ್ಯವಸ್ಥೆ ಮಾಡಲಾಗಿದೆ. ಶನಿವಾರ ಬೆಳಗ್ಗೆ ಮತ್ತೆ ಜಂಟಿ ಆಯುಕ್ತರ ಜೊತೆಯಲ್ಲಿ ಇಲ್ಲಿಗೆ ಭೇಟಿ ನೀಡಿ ಹಾನಿ ಬಗ್ಗೆ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.
ರಾಜಕಾಲುವೆಗಳನ್ನು ಬ್ಲಾಕ್ ಮಾಡಿದ ಪರಿಣಾಮ ಈ ಸಂಕಷ್ಟ ಎದುರಾಗಿದೆ. ಇಲ್ಲಿ ಕಂದಾಯ ಬಡಾವಣೆಗಳನ್ನು ಕಟ್ಟಿಕೊಂಡಿದ್ದಾರೆ. ಕಾನೂನು ಉಲ್ಲಂಘಿಸಿ ಅತಿಕ್ರಮಣ ಮಾಡಿದ ಯಾರೇ ಇದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಸ್ಪಷ್ಟ ಪಡಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss