Sunday, June 26, 2022

Latest Posts

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ: ಹೊತ್ತಿ ಉರಿದ ಹ್ಯಾಂಗ್ ಓವರ್ ಪಬ್

ಹೊಸದಿಗಂತ ಆನ್ ಲೈನ್ ಡೆಸ್ಕ್:

ಬೆಂಗಳೂರಿನ ಹೊಸುರು ಸರ್ಜಾಪುರ ರಸ್ತೆ (ಹೆಚ್ ಎಸ್ ಆರ್) ಬಡಾವಣೆಯ ಹ್ಯಾಂಗ್ ಓವರ್ ಪಬ್ ನಲ್ಲಿ ಅಗ್ನಿ‌ ಅವಘಡ ಸಂಭವಿಸಿದ್ದು, ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ವರದಿಯಾಗಿದೆ.

ಸೋಮವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿ ಹೊತ್ತಿ ಉರಿದಿದೆ ಎನ್ನಲಾಗಿದೆ. ಘಟನೆ ಸಂಬಂಧ ಸ್ಥಳಕ್ಕಾಗಮಿಸಿದ ಮೂರು ಅಗ್ನಿಶಾಮಕ ವಾಹನಗಳು ಬೆಂಕಿ ಆರಿಸುವಲ್ಲಿ ಯಶಸ್ವಿಯಾಗಿವೆ.ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ.

ಶಾರ್ಟ್ ಸೆರ್ಕ್ಯೂಟ್ ವಿಷಯ ತಿಳಿಯುತ್ತಿದ್ದಂತೆ ಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಹ್ಯಾಂಗ್ ಓವರ್ ಪಬ್ ಬಳಿ ಬಂದು ಶೀಘ್ರ ಬೆಂಕಿ ನಂದಿಸಲು ಸಹಕರಿಸಿದರು.

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss