Sunday, August 14, 2022

Latest Posts

ಬೆಂಗಳೂರಿನಲ್ಲಿ ವರುಣ ಅಬ್ಬರ: ಮುಂದಿನ 72 ಗಂಟೆಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ʼಯೆಲ್ಲೋ ಅಲರ್ಟ್ʼ ಘೋಷಣೆ!

ಮಂಗಳೂರು: ರಾಜ್ಯ ರಾಜಧಾನಿಯಲ್ಲಿ ಬೆಂಗಳೂರಿನಲ್ಲಿ ವರುಣ ಅಬ್ಬರಿಸಿದ್ದಾನೆ. ಗುಡುಗ ಸಹಿತ ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಜನರು ತತ್ತರಿಸಿದ್ದಾರೆ. ಮೆಜೆಸ್ಟಿಕ್, ಶಾಂತಿನರ, ಕೆಆರ್ ಸರ್ಕಲ್, ಮಲ್ಲೇಶ್ವರಂ, ಬಸವನಗುಡಿ, ಕತ್ರಿಗುಪ್ಪೆ ಇನ್ನೂ ಹಲವೆಡೆ ಭರ್ಜರಿ ಮಳೆಯಾಗಿದೆ. ಸುಮಾರು ಎರಡು ಗಂಟೆ ಕಾಲ ಸುರಿದ ಮಳೆಯಿಂದಾಗಿ ನಗರದ ಅನೇಕ ಪ್ರದೇಶಗಳಲ್ಲಿ ಮಂಡಿಯವರೆಗೆ ನೀರು ತುಂಬಿತು.
ಭಾರೀ ಮಳೆಯಿಂದಾಗಿ ಶಿವಾನಂದ ಸರ್ಕಲ್, ಯಲಹಂಕ, ಮಹಾಲಕ್ಷ್ಮೀ ಲೇಔಟ್, ಮೈಸೂರು ರಸ್ತೆ ಸೇರಿದಂತೆ ವಿವಿಧ ಕಡೆಯಲ್ಲಿ ರಸ್ತೆಗೆ ನೀರು ನುಗ್ಗಿ, ವಾಹನ ಸವಾರರು ಪರದಾಡುವಂತಾಗಿದೆ. ಅನೇಕ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ ಪರಿಣಾಮ, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಹಲವೆಡೆ ಮಳೆಯಾಗುತ್ತಿದ್ದು, ಮುಂದಿನ 3 ದಿನ ವರುಣ ತನ್ನ ಆರ್ಭಟವನ್ನು ಮುಂದುವರಿಲಿದ್ದಾನೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ 72 ಗಂಟೆ ಕಾಲ ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಗುಡುಗು-ಮಿಂಚು ಸಹಿತ ಭಾರಿ ಮಳೆಯಾಗಲಿದೆ. ಹಾಗಾಗಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಘೋಷಿಸಿದೆ.
ದಕ್ಷಿಣ ಒಳನಾಡಿನ ಬೆಂಗಳೂರು, ಬೆಂ.ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲಿ ಮುಂದಿನ 48 ಗಂಟೆ ಹಾಗೂ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು ಮತ್ತು ಹಾಸನದಲ್ಲಿ ಅ.25ರಂದು ಯೆಲ್ಲೋ ಅಲರ್ಟ್ ಇರಲಿದೆ. ಇನ್ನು ಅ.28ರಿಂದ ಹಿಂಗಾರು ಮಳೆ ಶುರುವಾಗಲಿದ್ದು, ಡಿ.31ರವರೆಗೆ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss