ಬೆಂಗಳೂರಿನಲ್ಲಿ ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

0
56

ಬೆಂಗಳೂರು: ಬೆಂಗಳೂರಿನ ಯಲಹಂಕ ನ್ಯೂಟೌನ್ ನಲ್ಲಿ ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ .
ಯಲಹಂಕ ನ್ಯೂಟೌನ್ ವ್ಯಾಪ್ತಿಯ ಅನಂತಪುರ ನಿವಾಸಿ ಮುನಿ ವೆಂಕಟಪ್ಪ (54), ಪತ್ನಿ ನಾಗಮಣಿ (50) ಮತ್ತು ಮಗ ರವಿ ಕುಮಾರ್ (27) ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೆಂಕಟಪ್ಪ ತಮ್ಮ ಸ್ನೇಹಿತರ ಬಳಿ ಲಕ್ಷಾಂತರ ರೂ. ಸಾಲ ಪಡೆದಿದ್ದ. ಆದರೆ ಅದನ್ನು ವಾಪಸ್ಸು ಕೊಡಲು ಸಾಧ್ಯವಾಗಿಲ್ಲ. ಹೀಗಾಗಿ ಇದರಿಂದ ನೊಂದು ಪತ್ನಿ ಮತ್ತು ಮಗನ ಜೊತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here