Wednesday, August 10, 2022

Latest Posts

ಬೆಂಗಳೂರಿನ ಗಲಭೆಗೆ ಗುಪ್ತಚರ ಇಲಾಖೆ ವೈಫಲ್ಯವೇ ಕಾರಣ: ಶಾಸಕ ತನ್ವೀರ್ ಸೇಠ್ ಆರೋಪ

ಮೈಸೂರು: ಬೆಂಗಳೂರಿನ ಗಲಭೆಗೆ ಗುಪ್ತಚರ ಇಲಾಖೆ ವೈಫಲ್ಯವೇ ಕಾರಣ ಎಂದು ಮೈಸೂರಿನ ಎನ್.ಆರ್. ಕ್ಷೇತ್ರದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಆರೋಪಿಸಿದ್ದಾರೆ.
ಬುಧವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಗುಪ್ತಚರ ಇಲಾಖೆ ತುಂಬಾ ವೀಕ್ ಆಗಿದೆ. ಮುಂದೆ ಏನಾಗುತ್ತದೆ ಎಂಬುದು ಗುಪ್ತಚರ ಇಲಾಖೆಗೆ ಗೊತ್ತಿರಬೇಕು. ಕರ್ತವ್ಯದಲ್ಲಿ ನಿರ್ಲಕ್ಷ÷್ಯ ವಹಿಸುವುದರಿಂದ ಸಾಕಷ್ಟು ಹಾನಿ ಆಗುವ ಸಾಧ್ಯತೆ ಇರುತ್ತದೆ. ಇಂತಹ ಸೂಕ್ಷ÷್ಮ ವಿಚಾರಗಳಲ್ಲಿ ಗುಪ್ತಚರ ಇಲಾಖೆ ಆಕ್ಟಿವ್ ಆಗಿರಬೇಕಿತ್ತು. ವೈಫಲ್ಯದ ಬಗ್ಗೆ ಸರ್ಕಾರ ಕೂಡಲೇ ತನಿಖೆ ನಡೆಸಬೇಕು. ಗಲಭೆ ಪ್ರಕರಣದ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ರಾಮಮಂದಿರ ಭೂಮಿ ಪೂಜೆ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಕೋಮು ಗಲಭೆ ಪ್ರಚೋದಿತ ಪೋಸ್ಟ್ಗಳನ್ನು ಹಾಕಲಾಗುತ್ತಿದೆ. ಈಗಾಗಲೇ ಹಲವು ಆಪ್‌ಗಳನ್ನು ನಿಷೇಧ ಮಾಡಲಾಗಿದೆ. ಇಂಥ ಕೆಲಸ ಮತ್ತಷ್ಟು ನಡೆಯಬೇಕು. ಸಾಮಾಜಿಕ ಜಾಲತಾಣಗಳಿಂದಾಗಿ ಸಮಾಜದ ವಾತಾವರಣ ಹದಗೆಡುತ್ತಿದೆ. ಯುವಕರು ವಾಕ್ ಸ್ವಾತಂತ್ರ÷್ಯವನ್ನು ಸೋಶಿಯಲ್ ಮೀಡಿಯಾಗಳಲ್ಲಿ ದುರ್ಬಳಕೆ ಮಾಡಿಕೊಳ್ಳಬಾರದು ಎಂದರು.
ಯುವಕರಿಗೆ ಉದ್ಯೋಗ ಇಲ್ಲ. ಉದ್ಯೋಗ ಇಲ್ಲದೇ ಇಂಥ ಕೆಲಸಕ್ಕೆ ಕೈ ಹಾಕುತ್ತಿದ್ದಾರೆ. ದುಡಿಯುವ ಕೈಗಳಿಗೆ ಕೆಲಸ ಕೊಡಬೇಕಿದೆ. ಆಗ ಇಂಥ ಚಟುವಟಿಕೆಗಳು ಕಡಿಮೆ ಆಗುತ್ತವೆ ಎಂದು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss