ಮೈಸೂರು: ಬೆಂಗಳೂರಿನ ಡಿಜೆ, ಕೆಜೆ ಹಳ್ಳಿಯಲ್ಲಿ ಪುಂಡರು ನಡೆಸಿದ ಗಲಭೆ ಪ್ರಕರಣಕ್ಕೆ ಸಂಬ0ಧಿಸಿದ0ತೆ ಶೀಘ್ರದಲ್ಲೇ ಕಾಂಗ್ರೆಸ್ನ ಸತ್ಯಶೋಧನಾ ಸಮಿತಿ ಕೆಪಿಸಿಸಿಗೆ ವರದಿ ಸಲ್ಲಿಸಲಿದೆ ಬೆಂಗಳೂರಿನ ಶಿವಾಜಿ ನಗರದ ಕಾಂಗ್ರೆಸ್ ಶಾಸಕ ರಿಜ್ಚಾನ್ ಅರ್ಷದ್ ತಿಳಿಸಿದರು.
ಸೋಮವಾರ ಮೈಸೂರಿನ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಡಿಜೆ, ಕೆಜೆ ಹಳ್ಳಿಯಲ್ಲಿ ಪುಂಡರು ನಡೆಸಿದ ಗಲಭೆ ಪ್ರಕರಣಕ್ಕೆ ಸಂಬ0ಧಿಸಿದ0ತೆ ಕಾಂಗ್ರೆಸ್ ಸತ್ಯಶೋಧನಾ ಸಮಿತಿಯಿಂದ ವರದಿ ಸಲ್ಲಿಸಲು ಯಾವುದೇ ವಿಳಂಬ ಮಾಡಿಲ್ಲ. ನಾವು ಒಂದು ತಿಂಗಳೊಳಗೆ ವರದಿ ಪಡೆಯುತ್ತೇವೆ ಎಂದು ಹೇಳಿದ್ದೆವು. ಹಾಗಾಗಿ ಸಮಿತಿಯು ಶೀಘ್ರದಲ್ಲೇ ಕೆಪಿಸಿಸಿಗೆ ತನ್ನ ವರದಿಯನ್ನು ಸಲ್ಲಿಸಲಿದೆ ಎಂದು ಹೇಳಿದರು.
ಗಲಭೆ ನಡೆಸಿದವರಲ್ಲಿ ಹಲವರು ಗಾಂಜಾ ಸೇವಿಸಿದ್ದರು ಎಂದು ತಿಳಿಸಲಾಗಿದೆ. ನಿಶ್ಚಿತವಾಗಿ ಕೆಲ ಯುವಕರು ಗಾಂಜಾ ಅಫೀಮಿಗೆ ಬಲಿಯಾಗಿದ್ದಾರೆ. ಡಿಜೆ ಹಳ್ಳಿ,ಕೆಜೆ ಹಳ್ಳಿ ಗಲಭೆ ವಿಚಾರದಲ್ಲಿ ಗಾಂಜಾ ಸೇವಿಸಿರಲಿ, ಬಿಡಲಿ ಆರೋಪಿಗಳಿಗೆ ಕಠಿಣ ಶಿಕ್ಷೆ ಯಾಗಬೇಕು ಎಂದು ಒತ್ತಾಯಿಸಿದರು.
ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ಒಂದು ದೊಡ್ಡ ಇಂಡಸ್ಟಿç ರೀತಿ ಬೃಹದಾಕಾರವಾಗಿ ಬೆಳೆದಿದೆ. ಈ ಸಂಬ0ಧ ನಾನು ಬೆಂಗಳೂರು ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿದ್ದೆ. ಡ್ರಗ್ಸ್ ಮಾಫಿಯಾಗೆ ಕಡಿವಾಣ ಹಾಕಿ ಅಂತ ವೈಯುಕ್ತಿಕವಾಗಿ ಮನವಿ ಮಾಡಿದ್ದೇನೆ ಎಂದರು.
ಸಿನಿಮಾ ರಂಗ ಇರಲಿ, ವಿದ್ಯಾರ್ಥಿಗಳಾಗಿರಲಿ ಇದು ಮನುಷ್ಯತ್ವಕ್ಕೆ ಧಕ್ಕೆ ತರುವ ಕೆಲಸ. ಶಾಲಾ ಕಾಲೇಜು ಹಂತದಲ್ಲೇ ವಿದ್ಯಾರ್ಥಿಗಳನ್ನು ಡ್ರಗ್ಸ್ಗೆ ಅಡಿಕ್ಟ್ ಮಾಡಿಸುವ ದೊಡ್ಡ ಮಾಫಿಯಾ ಇದೆ. ಪೊಲೀಸರು ಸೀರಿಯಸ್ ಆದರೆ ಡ್ರಗ್ಸ್ ಮಾಫಿಯಾಗೆ ಕಡಿವಾಣ ಹಾಕಬಹುದು. ಪೊಲೀಸರು ಪ್ರಮಾಣ ಮಾಡಿ ಹೊರಟರೆ ನೂರಕ್ಕೆ ನೂರರಷ್ಟು ಕಡಿವಾಣ ಹಾಕಬಹುದು. ಪೊಲೀಸರಿಗೆ ಗೊತ್ತಿಲ್ಲದೆ ಯಾವ ದಂಧೆಯೂ ನಡೆಯಲ್ಲ ಎನ್ನುವ ಮೂಲಕ ಡ್ರಗ್ಸ್ ಮಾಫಿಯಾಗೆ ಪೊಲೀಸರೆ ಕಾರಣ ಎಂದು ಆರೋಪಿಸಿದರು.
ಕೊರೋನಾ ಸೋಂಕು ಹರಡುವಿಕೆ ನಿಯಂತ್ರಣ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ ಸಾಮಾನ್ಯ ಕಾಯಿಲೆ ರೋಗಿಗಳು ಬೆಡ್ಗಳಿಗಾಗಿ ಪರದಾಡುತ್ತಿದ್ದಾರೆ. ಮೈಸೂರಿನಲ್ಲಿ ಈವರೆಗೆ ಖಾಸಗಿ ಆಸ್ಪತ್ರೆಗಳ ಜೊತೆ ಮೀಟಿಂಗ್ ಮಾಡಿಲ್ಲ. ಕೊರೋನಾ ನಡುವೆಯೂ ಸರ್ಕಾರ ವರ್ಗಾವಣೆ ದಂಧೆಗಿಳಿದಿದೆ. ಹಾಸಿಗೆ ದಿಂಬು, ಗ್ಲೌಸ್, ಉಪಕರಣ ಖರೀದಿಯಲ್ಲೂ ಕೋಟ್ಯಾಂತರ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದರು.
ಸದ್ಯದ ಪರಿಸ್ಥಿತಿಯಲ್ಲಿ ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾವನ್ನು ಸರಳವಾಗಿ ಆಚರಿಸಬೇಕು. ಸಂಪೂರ್ಣವಾಗಿ ದಸರಾ ಆಚರಿಸದೆ ಇರಬಾರದು. ದಸರಾ ಕೇವಲ ಮೈಸೂರಿಗೆ ಮಾತ್ರ ಸೀಮಿತವಲ್ಲ, ದಸರಾ ನಾಡ ಹಬ್ಬ ಎಂದರು.