ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ತಂತ್ರಜ್ಞಾನ ಮೇಳ 2020 ಕ್ಕೆ ಚಾಲನೆ ನೀಡಿದ್ದಾರೆ.
ಮುಖ್ಯಮಂತ್ರಿ ಸಿಎಂ ಯಡಿಯೂರಪ್ಪ, ಡಿಸಿಎಂ ಅಶ್ವತ್ಥ್ ನಾರಾಯಣ್ ಸೇರಿದಂತೆ ಅನೇಕ ಗಣ್ಯರು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಇಂದಿನಿಂದ ನ. 21ರವರೆಗೆ ಮೂರು ದಿನಗಳ ಕಾಲ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ತಂತ್ರಜ್ಞಾನ ಮೇಳ ನಡೆಯಲಿದೆ.
ತಂತ್ರಜ್ಞಾನ ಮೇಳದಲ್ಲಿ 25ಕ್ಕೂ ಹೆಚ್ಚು ದೇಶಗಳು ಭಾಗಿಯಾಗಿದ್ದು, ಕೆಲ ದೇಶಗಳು ಇದೇ ಮೊದಲ ಬಾರಿಗೆ ಭಾಗವಹಿಸಿವೆ. ಕೃಷಿ, ಸಂಶೋಧನೆ ಮತ್ತು ಅಭಿವೃದ್ಧಿ, ಸ್ಟಾರ್ಟ್ ಅಪ್ ಪಾಲುದಾರಿಕೆ ವಲಯಗಳಲ್ಲಿ 7 ಒಪ್ಪಂದಗಳಿಗೆ ಸಹಿ ಹಾಕಲಾಗುತ್ತೆ. ಜಾಗತಿಕ ಆವಿಷ್ಕಾರ ಮೈತ್ರಿಗೆ ಸಂಬಂಧಿಸಿದಂತೆ 15 ಅಧಿವೇಶನಗಳು ನಡೆಯಲಿವೆ. ವಿವಿಧ ದೇಶಗಳ 10ಕ್ಕೂ ಹೆಚ್ಚು ಸಚಿವರ ನಿಯೋಗ ತಂತ್ರಜ್ಞಾನ ಮೇಳದಲ್ಲಿ ಭಾಗಿಯಾಗಲಿವೆ. 60ಕ್ಕೂ ಹೆಚ್ಚು ಭಾಷಣಕಾರರು ಉಪನ್ಯಾಸ ನೀಡಲಿದ್ದಾರೆ .250ಕ್ಕೂ ಹೆಚ್ಚು ಕಂಪನಿಗಳು ತಮ್ಮ ಉತ್ಪನ್ನಗಳನ್ನು ಇಲ್ಲಿ ಪ್ರದರ್ಶಿಸಲಿವೆ. 20,000ಕ್ಕೂ ಹೆಚ್ಚು ಸಂದರ್ಶಕರು ಭೇಟಿ ನೀಡುವ ನಿರೀಕ್ಷೆ ಇದೆ.