Thursday, August 18, 2022

Latest Posts

ಬೆಂಗಳೂರಿನ ಗಲಭೆ ಬಳಿಕ ಎಚ್ಚೆತ್ತ ಹೈದರಾಬಾದ್ ಪೊಲೀಸ್: ಸಾಮಾಜಿಕ ಜಾಲತಾಣಗಳ ಮೇಲೆ ಕಟ್ಟೆಚ್ಚರ

ಹೈದರಾಬಾದ್: ಬೆಂಗಳೂರಿನ ಕೆ.ಜಿ ಹಳ್ಳಿ ಹಾಗೂ ಡಿ.ಜೆ ಹಳ್ಳಿಯಲ್ಲಿ ನಡೆದ ಗಲಭೆಯ ಬಳಿಕ ಇದೀಗ ಹೈದರಾಬಾದ್ ನಗರ ಪೊಲೀಸ್ ಆಯುಕ್ತ ಅಂಜನಿ ಕುಮಾರ್ ಸಾಮಾಜಿಕ ಜಾಲತಾಣಗಳನ್ನು ಮೇಲ್ವಿಚಾರಣೆ ನಡೆಸಿ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ನಗರ ಪೊಲೀಸ್ ಹಾಗೂ ಅಧಿಕಾರಿಗಳಿಗೆ ಸೂಚಿಸಿದರು.

ಹಿರಿಯ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಅಂಜನಿ ಕುಮಾರ್ ಅವರು, ಬೆಂಗಳೂರಿನಲ್ಲಿ ನಡೆದ ಗಲಭೆಯ ಕುರಿತು ಮಾಹಿತಿ ನೀಡಿದರು. ತುರ್ತು ಸಂದರ್ಭಗಳಲ್ಲಿ 10 ನಿಮಿಷಗಳಲ್ಲಿ ಸ್ಥಳದಲ್ಲಿರಬೇಕು. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಕಡ್ಡಾಯವಾಗಿ ಆಗಮಿಸಿ ಸ್ಥಳದ ಪರಿಶೀಲನೆ ನಡೆಸಿ, ಪರಿಸ್ಥಿತಿಯನ್ನು ನಿಂತ್ರಣಕ್ಕೆ ತರಬೇಕು ಎಂದು ತಿಳಿಸಿದರು.

ಮತ್ತಷ್ಟು ಮಾರ್ಗಸೂಚಿಗಳನ್ನು ತಿಳಿಸಿದ ಅಂಜನಿ ಕುಮಾರ್ ಅವರು, ರಾತ್ರಿ ವೇಳೆ ವಿಭಾಗದ ಎಸಿಪಿ ವಲಯದಲ್ಲಿ ಇರಬೇಕು ಹಾಗೂ ಗಲಭೆ ಸಂಭವಿಸಿದ ಸಂದರ್ಭದಲ್ಲಿ ಯಾವುದೇ ಠಾಣೆಯಲ್ಲೂ ನ್ಯಾಯವ್ಯಾಪಿ ಅನುಸರಿಸಲಾಗುದಿಲ್ಲ ಹಾಗೂ ಎಲ್ಲರೂ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!