Thursday, July 7, 2022

Latest Posts

ಬೆಂಗಳೂರು ಇನ್ನೊಂದು ಬ್ರಿಜಿಲ್ ಆಗೋದು ಬೇಡ, ಕನಿಷ್ಟ 20 ದಿನ‌ ಸಂಪೂರ್ಣ ಲಾಕ್ ಡೌನ್ ಮಾಡಿ: ಎಚ್ ಡಿಕೆ ಟ್ವೀಟ್

ಬೆಂಗಳೂರು: ಈಗ ಜನರ ಆರೋಗ್ಯ ಮುಖ್ಯವೇ ಹೊರತು ಆರ್ಥಿಕತೆಯಲ್ಲ.‌ ರಾಜಧಾನಿ ಬೆಂಗಳೂರಿನಲ್ಲಿ ಮಹಾಮಾರಿ ಕೊರೋನಾ ಮಟ್ಟಹಾಕಲು ಕನಿಷ್ಟ 20 ದಿನ‌ ಸಂಪೂರ್ಣ ಲಾಕ್ ಡೌನ್ ಮಾಡಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಕೊರೋನಾ ಆರ್ಭಟ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್ ಮಾರುಕಟ್ಟೆ, ಕಲಾಸಿಪಾಳ್ಯ, ಚಿಕ್ಕಪೇಟೆ ಮತ್ತು ಚಾಮರಾಜಪೇಟೆ ಏರಿಯಾಗಳನ್ನು ಜೂನ್ 30ರವರೆಗೆ ಸೀಲ್ ಡೌನ್ ಮಾಡಲು ಸರ್ಕಾರ ಮುಂದಾಗಿದೆ. ಸರಕಾರದ ಈ ನಿರ್ಧಾರದ ಬೆನ್ನಲ್ಲೇ ಮಾಜಿ ಸಿಎಂ ಟ್ವೀಟ್ ಮಾಡಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಜನರ ಪ್ರಾಣದ ಜೊತೆ ಚೆಲ್ಲಾಟ ನಿಲ್ಲಿಸಿ. ಕೆಲವೇ ಪ್ರದೇಶಗಳಲ್ಲಿ ಸೀಲ್ ಡೌನ್ ಲಾಕ್ ಡೌನ್ ಮಾಡಿದರೆ ಪ್ರಯೋಜನವಿಲ್ಲ.‌ ಬೆಂಗಳೂರು ನಿವಾಸಿಗಳು ಬದುಕುಳಿಯಬೇಕಾದರೆ ಈ ಕೂಡಲೇ ಕನಿಷ್ಟ 20 ದಿನ‌ ಸಂಪೂರ್ಣ ಲಾಕ್ ಡೌನ್ ಮಾಡಿ. ಇಲ್ಲವಾದಲ್ಲಿ ಬೆಂಗಳೂರು ಮತ್ತೊಂದು ಬ್ರೆಜಿಲ್ ಆಗಲಿದೆ.ಜನರ ಆರೋಗ್ಯ ಮುಖ್ಯವೇ ಹೊರತು ಆರ್ಥಿಕತೆಯಲ್ಲ ಎಂದು ಅವರು ಟ್ವೀಟ್ ನಲ್ಲಿ ಹೇಳಿಕೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss