ಬೆಂಗಳೂರು: ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಬಳಿ ಗಲಭೆಗೆ ಸಂಬಂಧಿಸಿದಂತೆ ಕೆಜೆ ಹಳ್ಳಿ ಹಾಗೂ ಡಿಜೆ ಹಳ್ಳಿಯಲ್ಲಿ ಈಗಾಗಲೇ ಸೆಕ್ಷನ್ 144 ಜಾರಿಯಲ್ಲಿದ್ದು, ಇನ್ನೂ ಎರಡು ದಿನ ಮುಂದುವರಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಹೇಳಿದ್ದಾರೆ.
ಈ ಗಲಭೆಯ ಆರೋಪಿಗಳೆಂದು ಹೇಳಲಾಗುತ್ತಿರುವ 17ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈವರೆಗೂ 193 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.