ಮೈಸೂರು: ಬೆಂಗಳೂರಿನ ಕೆಜಿ ಹಳ್ಳಿ, ಡಿಜೆ ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬoಧಿಸಿದoತೆ ಕಾಂಗ್ರೆಸ್ ನಾಯಕರು ಥರ್ಡ್ ಕ್ಲಾಸ್ ರಾಜಕೀಯ ನಡೆಸುತ್ತಿದ್ದಾರೆ ಎಂದು ಮಾಜಿ ಸಚಿವರೂ ಆದ ಮೈಸೂರಿನ ಕೆ.ಆರ್.ಕ್ಷೇತ್ರದ ಶಾಸಕ ಎಸ್.ಎ. ರಾಮದಾಸ್ ಕಿಡಿಕಾರಿದ್ದಾರೆ.
ಗುರುವಾರ ಮೈಸೂರಿನ ಬೆಮಲ್ ಆರ್ಚ್ ನಿಂದ ಮಾನಂದವಾಡಿ ಮುಖ್ಯರಸ್ತೆಗೆ ಸಂಪರ್ಕ ಹೊಂದುವ ಮುಖ್ಯರಸ್ತೆಯ 2.50 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಗಲಭೆ ವಿಚಾರದಲ್ಲಿ ಕಾಂಗ್ರೆಸ್ ನಾಯಕರಿಂದ ಥರ್ಡ್ ಕ್ಲಾಸ್ ರಾಜಕೀಯ ನಡೆಯುತ್ತಿದೆ. ಇಂತಹ ಸಂದರ್ಭ ತಮ್ಮದೇ ದಲಿತ ಶಾಸಕನ ಪರವಾಗಿ ನಿಲ್ಲದೆ, ಓಟ್ ಬ್ಯಾಂಕ್ ರಾಜಕೀಯ ಮಾಡುತ್ತಿದ್ದಾರೆ. ಇದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಶಾಸಕರೊಬ್ಬರ ಬೆಂಬಲಿಗನನ್ನು ಬಿಜೆಪಿ ಕಾರ್ಯಕರ್ತ ಅಂತ ಹೇಳಿ ಓಲೈಕೆಗೆ ನಿಂತಿದ್ದಾರೆ. ಅಲ್ಲದೆ, ತಮ್ಮದೇ ಶಾಸಕರ ಮನೆ ಮೇಲೆ ಕಿರಾತಕರು ದಾಳಿ ನಡೆಸಿದರೂ, ಅವರ ರಕ್ಷಣೆಗೆ ಕಾಂಗ್ರೆಸ್ ನಾಯಕರು ಮುಂದಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ತಪುö್ಪ ಯಾರೇ ಮಾಡಿದರೂ ಅವರಿಗೆ ಕಾನೂನು ರೀತಿಯ ಶಿಕ್ಷೆ ಆಗಬೇಕು. ಶಾಂತಿಯುತವಾಗಿರುವ ರಾಜ್ಯದಲ್ಲಿ ಅನಾವಶ್ಯಕವಾಗಿ ಗಲಭೆ ಮಾಡಲಾಗುತ್ತಿದೆ. ಈ ರೀತಿಯ ಘಟನೆಗಳನ್ನು ಎಲ್ಲಾ ಪಕ್ಷಗಳೂ ಖಂಡಿಸಬೇಕು. ಗಲಭೆಕೋರರ ವಿರುದ್ಧ ಕಠಿಣ ಕ್ರಮವನ್ನು ಸರ್ಕಾರ ತಕ್ಷಣವೇ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.