Wednesday, August 17, 2022

Latest Posts

ಬೆಂಗಳೂರು ನಗರದಾದ್ಯಂತ ನಿಷೇಧಾಜ್ಞೆ ಜಾರಿ: ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ

ಬೆಂಗಳೂರು: ಕೆ.ಜಿ ಹಳ್ಳಿ, ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ನಗರದಾದ್ಯಂತ 144 ಸೆಕ್ಷನ್ ಜಾರಿಯಾಗಿದ್ದು, ಡಿಜಿ ಹಳ್ಳಿ ಮತ್ತು ಕೆಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಸದ್ಯ ಕರ್ಫ್ಯೂ ಜಾರಿ ಮಾಡಲಾಗಿದೆ.
ಬೆಂಗಳೂರಿನಾದ್ಯಂತ ಗುರುವಾರ ಬೆಳಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.
ಪುಲಿಕೇಶಿನಗರ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಅಕ್ಕನ ಮಗ ನವೀನ್ ಅವರು ತಮ್ಮ ಫೇಸ್​ಬುಕ್​ನಲ್ಲಿ ಪ್ರವಾದಿ ಪೈಗಂಬರ್ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದರು. ಇದನ್ನು ಆಕ್ಷೇಪಿಸಿ ನಿನ್ನೆ ರಾತ್ರಿ ಸಾವಿರಕ್ಕೂ ಹೆಚ್ಚು ಜನರು ಡಿಜೆ ಹಳ್ಳಿ, ಕೆಜಿ ಹಳ್ಳಿಯಲ್ಲಿ ಗಲಭೆ ನಡೆಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!