Saturday, August 13, 2022

Latest Posts

ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ವರ್ಗಾವಣೆ; ನೂತನ ಆಯುಕ್ತರಾಗಿ ಕಮಲ್ ಪಂಥ್ ನೇಮಕ

ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಭಾಸ್ಕರ್ ರಾವ್ ಸೇರಿದಂತೆ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ‌ ಆದೇಶಿಸಿದೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಭಾಸ್ಕರ್ ರಾವ್ ಅವರನ್ನು ವರ್ಗಾವಣೆ ಮಾಡಿ, ಅವರ ಸ್ಥಾನಕ್ಕೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಕಮಲ್ ಪಂಥ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಭಾಸ್ಕರ್ ರಾವ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ.
ಆರ್ಥಿಕ ಅಪರಾಧಗಳು ಮತ್ತು ಅಪರಾಧ ತನಿಖಾ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಬಿ.ದಯಾನಂದ ಅವರನ್ನು ಕಮಲ್ ಪಂತ್‌ ಅವರ ವರ್ಗಾವಣೆಯಿಂದ ತೆರವಾದ ಗುಪ್ತಚರ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಸ್ಥಾನಕ್ಕೆ ವರ್ಗಾಯಿಸಲಾಗಿದೆ.

 

 

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss