ಬೆಂಗಳೂರು: ಈ ವರ್ಷದ ಸ್ವಾತಂತ್ರ್ಯೋತ್ಸವವನ್ನು ಸರಳವಾಗಿ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಆಚರಣೆ ಮಾಡಲು ಬಿಬಿಎಂಪಿ, ನಗರ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಸಿದ್ಧತೆ ಮಾಡಿಕೊಂಡಿದೆ.
ಕೊರೋನಾ ಕಾರಣದಿಂದಾಗಿ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಲಿಲ್ಲ. ಕೇವಲ 500 ಜನರಿಗೆ ಮಾತ್ರ ಆಸನದ ವ್ಯವಸ್ಥೆ ಮಾಡಲಾಗಿದೆ. ಸಮಾರಂಭಕ್ಕರೆ ೭೫ ಮಂದಿ ಕೊರೋನಾ ಯೋಧರನ್ನು ಮತ್ತು ಕೊರೋನಾದಿಂದ ಗುಣಮುಖರಾದ ೨೫ ಮಂದಿಯನ್ನು ಆಹ್ವಾನಿಸಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ತಿಳಿಸಿದ್ದಾರೆ.
ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ 9 ಗಂಟೆಗೆ ದ್ವಜಾರೋಹಣ ನೆರವೇರಿಸಲಿದ್ದಾರೆ. ವೆಬ್ ಕಾಸ್ಟಿಂಗ್ ಮೂಲಕ ನೇರ ಪ್ರಸಾರವಾಗಲಿದೆ. ಕೋವಿಡ್ ಮಾರ್ಗಸೂಚಿಯ ಅನ್ವಯವೇ ಕಾರ್ಯಕ್ರಮ ನಡೆಯಲಿದೆ.