Wednesday, June 29, 2022

Latest Posts

ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಹುಲುವಾಡಿ ದೇವರಾಜು

ರಾಮನಗರ: ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಸ್ಪಷ್ಟ ಬಹುಮತದಿಂದ ಗೆಲುವು ಖಚಿತ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹುಲುವಾಡಿ ದೇವರಾಜು ಹೇಳಿದರು. ಬುಧವಾರ ಕನಕಪುರ ನಗರದ ಮತಗಟ್ಟೆಯಲ್ಲಿ ಪಕ್ಷದ ಅಭ್ಯರ್ಥಿಯ ಮತಸಮೀಕ್ಷೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಬೆಂಗಳೂರು ಕೇಂದ್ರದಲ್ಲಿ ಯಾರೂ ಎಷ್ಟೇ ಪ್ರಭಾವವನ್ನು ಬೀರಿದರೂ ಸಹ ನಮ್ಮ ಪಕ್ಷದ ಅಭ್ಯರ್ಥಿಯ ಗೆಲುವು ಸ್ಪಷ್ಟವಾಗಿ ಗೋಚರಿಸುತ್ತಿದೆ. ಯಾವುದೇ ಪಕ್ಷದೊಂದಿಗೆ ಯಾರೇ ಹೊಂದಾಣಿಕೆ ಮಾಡಿಕೊಂಡಿದ್ದರೂ ನಮ್ಮ ಅಭ್ಯರ್ಥಿಗೆ ತೊಂದರೆಯಾಗುವುದಿಲ್ಲ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಜಾರಿಗೆ ತಂದಿರುವ ಜನಪರ ಯೋಜನೆಗಳನ್ನು ಪರಿಗಣಿಸಿ ಶಿಕ್ಷಕ ಬಂಧುಗಳು ಬಿಜೆಪಿ ಪಕ್ಷಕ್ಕೆ ಆಶೀರ್ವಾದ ಮಾಡಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದ ಅವರು ಬೆಂಗಳೂರು ನಗರ ಸೇರಿದಂತೆ ರಾಮನಗರ ಜಿಲ್ಲೆಯ ನಾಲ್ಕೂ ತಾಲೂಕುಗಳಲ್ಲಿ ನಮ್ಮ ಪಕ್ಷಕ್ಕೆ ಉತ್ತಮ ವಾತಾವರಣವಿದೆ. ಯಾರೇ ಅಬ್ಬರ ಮಾಡಿದರೂ ನಮಗೆ ಇವರು ಪ್ರತಿಸ್ಪರ್ಧಿಗಳಿಲ್ಲ. ನಮ್ಮ ಗೆಲುವು ನಿಶ್ಚಿತ ಎಂದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು, ಖಜಾಂಚಿ ಮಲ್ಲೇಶ್, ನಗರ ಘಟಕದ ಅಧ್ಯಕ್ಷ ಮುತ್ತಣ್ಣ, ಪ್ರಧಾನ ಕಾರ್ಯದರ್ಶಿ ಶಿವರುದ್ರಪ್ಪ, ಕಾರ್ಯದರ್ಶಿ ಅಣ್ಣೇಗೌಡ, ಒಬಿಸಿ ಅಧ್ಯಕ್ಷ ಮುನಿಯಪ್ಪ, ಪ್ರಧಾನ ಕಾರ್ಯದರ್ಶಿ ಹರಿಪ್ರಸಾದ್, ಎಸ್.ಸಿ. ಘಟಕದ ಅಧ್ಯಕ್ಷ ಚೇತನ್, ಯುವಘಟಕದ ಅಮಾನುಲ್ಲಾ ಖಾನ್, ನಾಸಿರ್, ಶಬೀರ್‌ಪಾಷ ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss