Monday, July 4, 2022

Latest Posts

ಬೆಂಗಳೂರು ಸೇರಿ ಯಾವ ಯಾವ ಜಿಲ್ಲೆಗಳು ಲಾಕ್ ಡೌನ್?

ಬೆಂಗಳೂರು: ಕೊರೊನಾವೈರಸ್ ಸೋಂಕಿನ ಹರಡುವಿಕೆಗೆ ಕನ್ನಡಿಗರು ಬೆಚ್ಚಿ ಬಿದ್ದಿದ್ದು, ಈಗಾಗಲೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ ಒಂದು ವಾರ ಲಾಕ್ ಡೌನ್ ಸೂಚಿಸಲಾಗಿದೆ. ಇನ್ನು ಕೊರೋನಾ ಹೆಚ್ಚಿರುವ ಜಿಲ್ಲೆಗಳ್ಲಲು ಲಾಕ್ ಡೌನ್ ಮಾಡಲಿದ್ದಾರೆ ಎನ್ನಲಾಗಿದೆ.
ರಾಜ್ಯದಲ್ಲಿ ಮಹಾಮಾರಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸೋಮವಾರ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಸಿಇಓಗಳ ಜೊತೆಗೆ ಎರಡು ಪ್ರತ್ಯೇಕ ಸಭೆಗಳನ್ನು ನಡೆಸಲಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳ ಜೊತೆ ಚರ್ಚಿಸಲಿದ್ದಾರೆ.
ಬೆಳಗ್ಗೆ 11 ಗಂಟೆಗೆ ಮೊದಲ ಸಭೆ ನಡೆಯಲಿದ್ದು ಮೊದಲಿಗೆ ಕೊರೊನಾವೈರಸ್ ಸೋಂಕು ಹೆಚ್ಚಾಗಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ಸಿಎಂ ಚರ್ಚಿಸಲಿದ್ದಾರೆ. ಸಂಜೆ ನಾಲ್ಕು ಗಂಟೆಗೆ ಅತಿಕಡಿಮೆ ಸೋಂಕಿತ ಪ್ರಕರಣಗಳು ಪತ್ತೆಯಾಗಿರುವ ಜಿಲ್ಲೆಗಳ ಡಿಸಿಗಳ ಜೊತೆಗೆ ಮಾತುಕತೆ ನಡೆಸಲಿದ್ದಾರೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕಲಬುರಗಿ, ಮೈಸೂರು, ಮಂಗಳೂರು, ಉಡುಪಿ, ಬೀದರ್, ಧಾರವಾಡ, ರಾಯಚೂರು ಮತ್ತು ಬೀದರ್ ಜಿಲ್ಲಾಧಿಕಾರಿಗಳ ಜೊತೆಗೆ ಮಾತುಕತೆ ನಡೆಸಲಿರುವ ಸಿಎಂ ಜಿಲ್ಲೆಯಲ್ಲಿನ ಪರಿಸ್ಥಿತಿಯ ಕುರಿತು ಮಾಹಿತಿ ಪಡೆದುಕೊಳ್ಳಲಿದ್ದಾರೆ. ಕೊರೊನಾವೈರಸ್ ಸೋಂಕು ಕಡಿಮೆ ಇರುವ ಜಿಲ್ಲಾಧಿಕಾರಿಗಳಿಂದ ಅಭಿಪ್ರಾಯ ಸಂಗ್ರಹಿಸಲಿರುವ ಸಿಎಂ, ಎರಡು ಸಭೆ ಬಳಿಕ ಯಾವ್ಯಾವ ಜಿಲ್ಲೆಗಳನ್ನು ಲಾಕ್​ಡೌನ್ ಮಾಡಬೇಕು ಎಂದು ನಿರ್ಧರಿಸಲಿದ್ಧಾರೆ. ಅಲ್ಲದೇ, ಲಾಕ್​ಡೌನ್ ನಿಯಮಗಳು ಹೇಗಿರಬೇಕು ಎಂಬ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss