ಬೆಳಗಾವಿ : ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ವಿರಾಮ ನೀಡಿದ್ದ ಮಹಾಮಾರಿ ಕೊರೋನಾ ವೈರಸ್ ಸೋಂಕು. ಮತ್ತೆ ಆರ್ಭಟ ಆರಂಭಿಸಿದೆ. ಓರ್ವ ಮಹಿಳೆಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿರುತ್ತದೆ.ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 147 ಕ್ಕೆ ಏರಿಕೆಯಾಗಿದೆ. ಆರೋಗ್ಯ ಇಲಾಖೆಯ ಶನಿವಾರ ಬಿಡುಗಡೆ ಮಾಡಿರುವ ಬುಲಟೆನ್ ಪ್ರಕಟಣೆಯ ಪ್ರಕಾರ ಬೆಳಗಾವಿಯಲ್ಲಿ 1 ಪ್ರಕರಣ ದೃಢಪಟ್ಟಿರುತ್ತದೆ. ಇಂದಿನ ಹೊಸ ಪ್ರಕರಣ ಸೇರಿದಂತೆ 147 ಜನರಿಗೆ ಸೋಂಕು ದೃಢಪಟ್ಟಿದ್ದು, 80 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುತ್ತಾರೆ. ಓರ್ವ ಮಹಿಳೆ ಮೃತಪಟ್ಟಿರುತ್ತಾರೆ.