Thursday, August 11, 2022

Latest Posts

ಬೆಳಗಾವಿ| ಓರ್ವ ವ್ಯಕ್ತಿಯಲ್ಲಿ ಕೊರೋನಾ ದೃಢ: ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 303ಕ್ಕೆ ಏರಿಕೆ

ಬೆಳಗಾವಿ: ಕಳೆದ ಎರಡು ದಿನಗಳಿಂದ ತಣ್ಣಗಾಗಿದ್ದ ಮಹಾಮಾರಿ ಕೊರೋನಾ ವೈರಸ್ ಅಟ್ಟಹಾಸ ಮತ್ತೆ ಮುಂದುವರೆದಿದೆ. ಓರ್ವ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 303 ಕ್ಕೆ ಏರಿಕೆಯಾಗಿದೆ.
ಶುಕ್ರವಾರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲಟೆನ್ ದಲ್ಲಿ ಓರ್ವ ವ್ಯಕ್ತಿಯಲ್ಲಿ ಸೋಂಕು ತಗುಲಿದ ವರದಿಯಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 62 ಸೋಂಕಿತರು ಶುಕ್ರವಾರ ಬಿಡುಗಡೆಯಾಗಿದ್ದಾರೆ.
ಜಿಲ್ಲೆಯಲ್ಲಿ ಶುಕ್ರವಾರದ ವರೆಗೆ ಕೊರೋನಾ ವೈರಸ್ ಸೋಂಕಿತ 303 ಜನರಲ್ಲಿ 217 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 85 ಜನರಲ್ಲಿ ಸೋಂಕು ಸಕ್ರಿಯವಾಗಿದೆ. ಓರ್ವ 80 ವರ್ಷದ ವೃದ್ಧೆ ವೈರಸ್ ಗೆ ಮೃತಪಟ್ಟಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss