ಹೊಸದಿಗಂತ ವರದಿ,ಬೆಳಗಾವಿ:
ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ಮೂರು ಕೃಷಿ ಮಸೂದೆಯನ್ನು ಕೈಬಿಡುವಂತೆ ಒತ್ತಾಯಿಸಿ ಭಾನುವಾರ ರೈತ ಸಂಘಟನೆಯ ಸದಸ್ಯರು ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯ ವರಗೆ ಅರೆಬೆತ್ತಲೆ ಮೆರವಣಿಗೆ ನಡೆಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಗೋ ಬ್ಯಾಕ್ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರೈತ ವಿರೋಧಿ ಕೃಷಿ ಮಸೂದೆಯನ್ನು ಜಾರಿಗೊಳಿಸಿರುವ ಕೇಂದ್ರ ಸರ್ಕಾರದ ನಡೆಯನ್ನು ಲಾಭ ಹಾನಿಯ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಚರ್ಚೆ ನಡೆಸಲು ಅವಕಾಶ ನೀಡದ ಜನಪ್ರತಿನಿಧಿಗಳ ವಿರುದ್ಧ ಪ್ರತಿಭಟನಾಕಾರರು ಹರಿಹಾಯ್ದರು.
ಕಳೆದ 60 ದಿನಗಳಿಂದ ದೆಹಲಿಯಲ್ಲಿ ಕೃಷಿ ವಿರೋಧ ನೀತಿಯನ್ನು ಜಾರಿಗೆ ಗೊಳಿಸಿರುವುದನ್ನು ಖಂಡಿಸಿ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಸರ್ಕಾರ ಪ್ರತಿಭಟನೆಗೆ ಸ್ಪಂದಿಸುವ ಕಾರ್ಯ ಮಾಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಘವೇಂದ್ರ ನಾಯಕ, ಪ್ರಕಾಶ ನಾಯ್ಕ, ಜಯಶ್ರೀ ಗುರನ್ನವರ ಸೇರಿದಂತೆ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.