Wednesday, July 6, 2022

Latest Posts

ಬೆಳಗಾವಿ| ಕೋವಿಡ್-19 ಸೋಂಕು ತಗುಲಿದ್ದವರ ಪೈಕಿ ಇಬ್ಬರು ಸಂಪೂರ್ಣ ಗುಣಮುಖ

ಬೆಳಗಾವಿ: ಕೋವಿಡ್-19 ಸೋಂಕು ತಗುಲಿದ್ದವರ ಪೈಕಿ ಇಬ್ಬರು ಸಂಪೂರ್ಣ ಗುಣಮುಖರಾಗಿದ್ದು, ಗುರುವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ ಎಂದು ಬಿಮ್ಸ್ ನಿರ್ದೇಶಕ ಡಾ. ವಿನಯ ದಾಸ್ತಿನಕೊಪ್ಪ ತಿಳಿಸಿದ್ದಾರೆ.
ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರೇಬಾಗೇವಾಡಿಯ ಪಿ-284 ಮತ್ತು ಕುಡಚಿಯ ಪಿ-300 ಇಬ್ಬರು ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಜಿಲ್ಲೆಯಲ್ಲಿ ಇಂದಿನವರೆಗೆ ಒಟ್ಟು 74 ಜನರಲ್ಲಿ ಸೋಂಕು ಪತ್ತೆಯಾಗಿರುತ್ತದೆ. ಇದೀಗ ಒಟ್ಟಾರೆ 36 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಬ್ಬರು ಮೃತಪಟ್ಟಿರುತ್ತಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss