Saturday, July 2, 2022

Latest Posts

ಬೆಳಗಾವಿ| ಚಪ್ಪಾಳೆ ತಟ್ಟಿ ಲಸಿಕಾಕರಣಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಹಿರೇಮಠ

ಹೊಸದಿಗಂತ ವರದಿ, ಬೆಳಗಾವಿ:

ದೇಶದ ಬಹುನಿರೀಕ್ಷಿತ ಕೋವಿಶೀಲ್ಡ್ ಲಸಿಕಾ ಕಾರ್ಯಕ್ರಮಕ್ಕೆ ಇಂದು ಜಿಲ್ಲೆಯಲ್ಲಿಯೂ ಚಾಲನೆ ದೊರೆತಿದೆ.

ನಗರದಲ್ಲಿ ಇರುವ ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಹಾಗೂ ಕೆ.ಎಲ್.ಇ. ಆಸ್ಪತ್ರೆ ಸೇರಿದಂತೆ ಒಟ್ಟು 13 ಕಡೆಗಳಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಈಗಾಗಲೇ ಗುರುತಿಸಲಾಗಿರುವ ಆಯ್ದ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತಿದೆ.

ಅಥಣಿ ತಾಲ್ಲೂಕು ಆಸ್ಪತ್ರೆಯ ಸಿಬ್ಬಂದಿಯೊಬ್ಬರಿಗೆ ಲಸಿಕೆ ಹಾಕುವ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಹಿರೇಮಠ ಅವರು ಚಪ್ಪಾಳೆ ತಟ್ಟುವ ಮೂಲಕ ಲಸಿಕಾಕಾರಣಕ್ಕೆ ಚಾಲನೆ ನೀಡಿ ಸಂತಸ ವ್ಯಕ್ತಪಡಿಸಿದರು.

ಕೋವಿಡ್ ಲಸಿಕೆ ನೀಡುವುದಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯು ನೀಡಿರುವ ಸಲಹೆ-ಸೂಚನೆಗಳನ್ನು ಮತ್ತು ಮಾರ್ಗದರ್ಶಿ ಸೂತ್ರಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ. ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss