ಬೆಳಗಾವಿ ಜಿಲ್ಲೆಯಲ್ಲಿ ಬಾಲ್ಯ ವಿವಾಹಕ್ಕೆ ತಡೆ

0
41

ಧಾರವಾಡ: ಬೆಳಗಾವಿ ಜಿಲ್ಲೆ ಖಾನಾಪೂರ ತಾಲೂಕಿನ ಬೋಗುರು ಗ್ರಾಮದ ಅಪ್ರಾಪ್ತ ಬಾಲಕಿ ಜತೆ ಧಾರವಾಡ ತಾಲೂಕಿನ ಶಿಂಗನಹಳ್ಳಿ ಗ್ರಾಮದ ಯುವಕನೊಂದಿಗೆ ವಿವಾಹ ಮಾಡುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ, ಮಕ್ಕಳ ಸಹಾಯವಾಣಿಯ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರುಗಳ ತಂಡದೊ0ದಿಗೆ ಭೇಟಿ ನೀಡಿ ಬಾಲ್ಯ ವಿವಾಹ ತಡೆ ಹಿಡಿಯಲಾಗಿದೆ.
ಅಪ್ರಾಪ್ತ ಬಾಲಕ, ಬಾಲಕಿಯರ ತಂದೆ, ತಾಯಿ-ನೆರೆದ ಹಿರಿಯರಿಗೆ ಬಾಲ್ಯ ವಿವಾಹ ನಿಷೇಧ ಮತ್ತು ಕರ್ನಾಟಕ ತಿದ್ದುಪಡಿ ಕಾಯ್ದೆ-2016ರ ಕುರಿತು ಮಾಹಿತಿ ತಿಳಿಸಿ ಜಾಗೃತಿ ಮೂಡಿಸಿದ್ದಾರೆ. ಧಾರವಾಡ ಮಕ್ಕಳ ಕಲ್ಯಾಣ ಸಮಿತಿಯಲ್ಲಿ ನಡೆಯುವ ಸಭೆಗೆ ಹಾಜರಾಗುವಂತೆ ಬಾಲಕಿ ಹಾಗೂ ಬಾಲಕಿಯ ಪಾಲಕರಿಗೆ ನೋಟಿಸ್ ನೀಡಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here