ಬೆಳಗಾವಿ: ಮಹಾಮಾರಿ ಕೊರೋನಾ ಅಟ್ಟಹಾಸ ಮತ್ತೆ ಜಿಲ್ಲೆಯಲ್ಲಿ ಮುಂದುವರೆದಿದೆ. ಓರ್ವ ಯುವಕನಲ್ಲಿ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 309 ಏರಿಕೆಯಾಗಿದೆ.
ಶನಿವಾರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲಟೆನ್ ದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲು ತಮಿಳುನಾಡಿನ ಚೆನೈದಿಂದ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿಗೆ ಆಗಮಿಸಿರುವ 18 ವರ್ಷದ ಯುವಕನಲ್ಲಿ ಸೋಂಕು ಕಾಣಿಸಿಕೊಂಡಿದೆ.
ಜಿಲ್ಲೆಯಲ್ಲಿ ಇದುವರೆಗೆ ಸೋಂಕಿತ 309 ಜನರಲ್ಲಿ 279 ಜನರು ಬಿಡುಗಡೆಯಾಗಿದ್ದಾರೆ. ಹಿರೇಬಾಗೇವಾಡಿಯ 80 ವರ್ಷದ ಓರ್ವ ಮಹಿಳೆ ಮೃತಪಟ್ಟಿದ್ದು, 29 ಜನರಲ್ಲಿ ಸೋಂಕು ಸಕ್ರಿಯವಾಗಿದೆ.