ಬೆಳಗಾವಿ: ಮಹಾಮಾರಿ ಕೊರೋನಾ ವೈರಸ್ ನಂಜಿಗೆ ಮತ್ತೆ ಜಿಲ್ಲೆ ಬೆಚ್ಚಿ ಬಿದ್ದಿದೆ. 2 ವರ್ಷದ ಹೆಣ್ಣು ಮಗು ಸೇರಿದಂತೆ 4 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 145 ಕ್ಕೆ ಏರಿಕೆಯಾಗಿದೆ.
ಬುಧವಾರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲಟೆನ್ ದಲ್ಲಿ ಕೇರಳದಿಂದ ಬೆಳಗಾವಿಗೆ ಆಗಮಿಸಿರುವ 2 ವರ್ಷದ ಹೆಣ್ಣು ಮಗುವಿಗೆ ಸೋಂಕು ದೃಢಪಟ್ಟಿದೆ.
ಮಹಾರಾಷ್ಟ್ರದಿಂದ ಆಗಮಿಸಿರುವ 32 ವರ್ಷದ ವ್ಯಕ್ತಿ ಹಾಗೂ 37 ವರ್ಷದ ಮಹಿಳೆ ಸೇರಿದಂತೆ ದೆಹಲಿಯಿಂದ ಹಿಂದಿರುಗಿ ಬಂದಿರುವ 28 ವರ್ಷದ ವ್ಯಕ್ತಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ದೆಹಲಿಯ ತಬ್ಲಿಘಗಳ ನಂಟು ಕಡಿಮೆಯಾಗುತ್ತಿದೆ ಎನ್ನುವಾಗ ಜಿಲ್ಲೆಯಲ್ಲಿ ಜಾರ್ಖಂಡ್ ಹಾಗೂ ಮಹಾರಾಷ್ಟ್ರದ ನಂಜು ಆರಂಭವಾಗಿದ್ದು, ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗುತ್ತಿದೆ.