Wednesday, August 10, 2022

Latest Posts

ಬೆಳಗಾವಿ ಜಿಲ್ಲೆಯಲ್ಲಿ 290 ಜನರಿಗೆ ಕೊರೋನಾ ಸೋಂಕು ದೃಢ , 930 ಮಂದಿ ಗುಣಮುಖ

ಬೆಳಗಾವಿ : ಜಿಲ್ಲೆಯಲ್ಲಿ ಶುಕ್ರವಾರ ಕೂಡ ಮಹಾಮಾರಿ ಕೊರೋನಾ ರಣಕೇಕೆ ಹಾಕಿದ್ದು. ಹೊಸದಾಗಿ ಬರೊಬ್ಬರಿ 290 ಜನರಿಗೆ ಕೊರೋನಾ ಸೋಂಕು ತಗುಲಿದೆ. ಕೊರೋನಾ ಮೃತ್ಯು ಮೃದಂಗ ಮುಂದುವರೆದಿದ್ದು ಶುಕ್ರವಾರ 4 ಮಂದಿ ಮೃತಪಟ್ಟಿದ್ದಾರೆ.
ಜಿಲ್ಲಾ ಆರೋಗ್ಯ ಇಲಾಖೆ ಹೊರಡಿಸಿದ ಆರೋಗ್ಯ ಬುಲೆಟಿನ್‍ನಲ್ಲಿ 290 ಕೊರೊನಾ ಪಾಸಿಟಿವ್ ಕೇಸ್‍ಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 11457 ಕ್ಕೆ ಏರಿಕೆಯಾಗಿದೆ. ಶುಕ್ರವಾರ ಒಂದೇ ದಿನ 930 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮೃತರ ಸಂಖ್ಯೆ 177 ಕ್ಕೆ ಏರಿಕೆಯಾಗಿದೆ. 11457 ಸೋಂಕಿತರಲ್ಲಿ ಇದುವರೆಗೆ 7475 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದರೆ, 3085 ಜನರಲ್ಲಿ ಸೋಂಕು ಸಕ್ರಿಯವಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss