ಬೆಳಗಾವಿ : ಜಿಲ್ಲೆಯಲ್ಲಿ ಭಾನುವಾರ ಕೂಡ ಮಹಾಮಾರಿ ಕೊರೋನಾ ರಣಕೇಕೆ ಹಾಕಿದ್ದು. ಹೊಸದಾಗಿ 357 ಜನರಲ್ಲಿ ಕೊರೋನಾ ವೈರಸ್ ಸೋಂಕು ತಗುಲಿದೆ. ಕೊರೋನಾ ಮೃತ್ಯು ಮೃದಂಗ ಮುಂದುವರೆದಿದ್ದು ಭಾನುವಾರ 4 ಮಂದಿ ಮೃತಪಟ್ಟಿದ್ದಾರೆ.
ಜಿಲ್ಲಾ ಆರೋಗ್ಯ ಇಲಾಖೆ ಹೊರಡಿಸಿದ ಆರೋಗ್ಯ ಬುಲೆಟಿನ್ನಲ್ಲಿ 357 ಕೊರೊನಾ ಪಾಸಿಟಿವ್ ಕೇಸ್ಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 12076 ಕ್ಕೆ ಏರಿಕೆಯಾಗಿದೆ. ಭಾನುವಾರ ಒಂದೇ ದಿನ 715 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮೃತರ ಸಂಖ್ಯೆ 184 ಕ್ಕೆ ಏರಿಕೆಯಾಗಿದೆ. 12076 ಸೋಂಕಿತರಲ್ಲಿ ಇದುವರೆಗೆ 8585 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದರೆ, 3307 ಜನರಲ್ಲಿ ಸೋಂಕು ಸಕ್ರಿಯವಾಗಿದೆ.