Sunday, June 26, 2022

Latest Posts

ಬೆಳಗಾವಿ ಜಿಲ್ಲೆಯಲ್ಲಿ 64 ಜನರಲ್ಲಿ ಸೋಂಕು ದೃಢ

ಬೆಳಗಾವಿ: ಜಗತ್ತನ್ನೇ ತಲ್ಲಣಗೊಳಿಸಿರುವ ಮಹಾಮಾರಿ ಕೊರೋನಾ ವೈರಸ್ ಅಟ್ಟಹಾಸ ಜಿಲ್ಲೆಯಲ್ಲಿ ಮುಂದುವರೆದಿದೆ. ಮಂಗಳವಾರ 7 ವರ್ಷದ ಬಾಲಕ ಸೇರಿದಂತೆ 64 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 561 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ 561 ಸೋಂಕಿತರಲ್ಲಿ 362 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 14 ಜನ ಮೃತಪಟ್ಟಿದ್ದು, 185 ಜನರಲ್ಲಿ ಸೋಂಕು ಸಕ್ರಿಯವಾಗಿದೆ.
ದಿನದಿಂದ ದಿನಕ್ಕೆ ಜಿಲ್ಲೆಯಲ್ಲಿ ಕೊರೋನಾ ವೈರಸ್ ಸೋಂಕು ಹೆಚ್ಚಾಗುತ್ತಿದೆ. ಒಂದೇ ದಿನ ಅರ್ಧ ಶತಕ ಮಿರಿಸಿ ಜನರ ಆತಂಕಕ್ಕೆ ಕಾರಣವಾಗುತ್ತಿದೆ.
ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಕೊರೋನಾ ಮಹಾಮಾರಿ ವಕ್ಕರಿಸಿದ್ದು ಮೃತ್ಯು ಮೃದಂಗ ಬಾರಿಸುತ್ತಿದೆ. ಅಥಣಿ ತಾಲೂಕಿನಲ್ಲಿ ಇದುವರೆಗೆ ಹೆಚ್ಚಿನ ಸಾವು ಸಂಭವಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss