Thursday, August 11, 2022

Latest Posts

ಬೆಳಗಾವಿ| ಜೂನ್ 15 ರವರೆಗೆ ಶ್ರೀ ಕ್ಷೇತ್ರ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಭಕ್ತರಿಗಿಲ್ಲ ದೇವರ ದರ್ಶನಕ್ಕೆ ಅವಕಾಶ

ಬೆಳಗಾವಿ: ಮಹಾರಾಷ್ಟ್ರ ಸೇರಿದಂತೆ ನೆರೆಯ ರಾಜ್ಯಗಳಲ್ಲಿ ಕೊರೋನಾ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತಿರುವುದರಿಂದ ಭಕ್ತರು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಜೂನ್ 15 ರವರೆಗೆ ಜಿಲ್ಲೆಯ ಶ್ರೀಕ್ಷೇತ್ರ ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ ಭಕ್ತಾಧಿಗಳಿಗೆ ಅವಕಾಶವಿರುವುದಿಲ್ಲ ಎಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ರವಿ ಕೋಟಾರಗಸ್ತಿ ತಿಳಿಸಿದ್ದಾರೆ.
ಈ ಕುರಿತು ಶನಿವಾರ ಪ್ರಕಟಣೆ ನೀಡಿರುವ ಅವರು, ಯಲ್ಲಮ್ಮದೇವಿ ದೇವಸ್ಥಾನಕ್ಕೆ ಎಲ್ಲ ರಾಜ್ಯಗಳಿಂದ ಭಕ್ತರು ಆಗಮಿಸುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಸದ್ಯಕ್ಕೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡದಂತೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿರುತ್ತಾರೆ ಎಂದು ತಿಳಿಸಿದ್ದಾರೆ.
ದೇವಸ್ಥಾನದಲ್ಲಿ ಎಂದಿನಂತೆ ಧಾರ್ಮಿಕ ವಿಧಿವಿಧಾನಗಳು ಮತ್ತು ಸರ್ಕಾರದ ಮಾರ್ಗಸೂಚಿ ಪ್ರಕಾರ ಪೂಜೆ ನಡೆಸಲಾಗುತ್ತಿದೆ ಎಂದು ರವಿ ಕೋಟಾರಗಸ್ತಿ ಸ್ಪಷ್ಟಪಡಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss