Wednesday, July 6, 2022

Latest Posts

ಬೆಳಗಾವಿ| ನಿಯಮ ಉಲ್ಲಂಘಿಸಿ ಮಹಾರಾಷ್ಟ್ರದಿಂದ ಜಿಲ್ಲೆಯನ್ನು ಪ್ರವೇಶಿಸಿದ ಮೂವರ ಮೇಲೆ ಪ್ರಕರಣ

ಬೆಳಗಾವಿ: ಲಾಕ್ ಡೌನ್ ಮಾರ್ಗಸೂಚಿ ಪ್ರಕಾರ ಸೇವಾಸಿಂಧು ಮೂಲಕ ಇ-ಪಾಸ್ ಪಡೆಯದೇ ನಿಯಮ ಉಲ್ಲಂಘಿಸಿ ಮಹಾರಾಷ್ಟ್ರದಿಂದ ಬೆಳಗಾವಿ ಜಿಲ್ಲೆಯನ್ನು ಪ್ರವೇಶಿಸಿದ ಮೂವರ ಮೇಲೆ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ತಿಳಿಸಿದ್ದಾರೆ.
ಬೆಳಗಾವಿ ನಗರದಲ್ಲಿ ಗುರುವಾರ ಪತ್ತೆಯಾಗಿರುವ 27 ವರ್ಷದ ಸೋಂಕಿತ ಮಹಿಳೆ(ಪಿ-974)ಯ ಪತಿ, ಸಹೋದರ ಮತ್ತು ವಾಹನ ಚಾಲಕನ ಮೇಲೆ ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿರುತ್ತದೆ.
ಸದರಿ ಮಹಿಳೆಯನ್ನು ಆಕೆಯ ಪತಿಯು ಮಹಾರಾಷ್ಟ್ರದಿಂದ ಬೆಳಗಾವಿಗೆ ಕರೆತಂದಿದ್ದರು. ಇ-ಪಾಸ್ ಪಡೆಯದೇ ಅಕ್ರಮವಾಗಿ ಜಿಲ್ಲೆಯನ್ನು ಪ್ರವೇಶಿಸಿದ್ದು ಮಾತ್ರವಲ್ಲದೇ ಈ ಬಗ್ಗೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೂ ಮಾಹಿತಿಯನ್ನು ನೀಡಿರಲಿಲ್ಲ.
ಆದ್ದರಿಂದ ಸೋಂಕಿತ ಮಹಿಳೆಯ ಪತಿ, ಸಹೋದರ ಮತ್ತು ಚಾಲಕನ ವಿರುದ್ಧ ಐಪಿಸಿ ಕಲಂ 269, 270, 188. 201, 202, r/w 34 ಮತ್ತು ಪ್ರಕೃತಿ ವಿಕೋಪ ನಿರ್ವಹಣಾ ಕಾಯ್ದೆಯ ಸೆಕ್ಷನ್ 3 ರ ಪ್ರಕಾರ ದೂರು ದಾಖಲಿಸಲಾಗಿರುತ್ತದೆ.
ಮಹಾನಗರ ಪಾಲಿಕೆಯ ಅಧಿಕಾರಿಗಳು ನೀಡಿದ ದೂರಿನ ಮೇರೆಗೆ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ.
ಸೋಂಕಿತ ಮಹಿಳೆಯನ್ನು ಈಗಾಗಲೇ ಆಸ್ಪತ್ರೆಗೆ ಸೇರಿಸಲಾಗಿದ್ದು, ಅವರೊಂದಿಗೆ ಪ್ರಾಥಮಿಕ ಸಂಪರ್ಕಕ್ಕೆ ಬಂದಿರುವ ಹತ್ತು ಜನರನ್ನು ಸಾಂಸ್ಥಿಕ ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ. ಸಾರ್ವಜನಿಕರು ಆತಂಕಕ್ಕೆ ಒಳಗಾಗಬಾರದು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss