ಬೆಳಗಾವಿ: ತೀವ್ರ ಉಸಿರಾಟದ ತೊಂದರೆ ಅನುಭವಿಸುತ್ತಿದ್ದ 30 ವರ್ಷದ ಮಹಿಳೆಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 317 ಕ್ಕೆ ಏರಿಕೆಯಾಗಿದೆ.
ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು. ಶುಕ್ರವಾರ
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿರುವ ಬುಲೆಟಿನ್ನಲ್ಲಿ 30 ವರ್ಷದ ಮಹಿಳೆಗೆ ಕೊರೋನಾ ಸೋಂಕು ದೃಢಪಟ್ಟಿದೆ. ಶುಕ್ರವಾರದ ಒಂದು ಪ್ರಕರಣ ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 317 ಕ್ಕೆ ಏರಿಕೆಯಾಗಿದೆ.