ಬೆಳಗಾವಿ : ಜಿಲ್ಲೆಯಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದೆ. ಭಾನುವಾರ ಒಂದೇ ದಿನ
235 ಜನರಲ್ಲಿ ಸೋಂಕು ವಕ್ಕರಿಸಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 5409 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ಸೋಂಕಿತ 5409 ಜನರಲ್ಲಿ ಭಾನುವಾರ ಆಸ್ಪತ್ರೆಯಿಂದ 455 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಯಾಗಿದ್ದು, ಒಟ್ಟು
2104 ಜನರು ಆಸ್ಪತ್ರೆಯಿಂದ ಗುಣಮುಖರಾಗಿ ಇದುವರೆಗೆ ಬಿಡುಗಡೆಯಾಗಿದ್ದಾರೆ. 94 ಜನರು ಇದುವರೆಗೆ ಮಹಾಮಾರಿ ಕೊರೋನಾ ಅಟ್ಟಹಾಸಕ್ಕೆ ಬಲಿಯಾಗಿದ್ದು, 3211 ಜನರಲ್ಲಿ ಸೋಂಕು ಸಕ್ರಿಯವಾಗಿದೆ.