Monday, August 15, 2022

Latest Posts

ಬೆಳಗಾವಿ| ರಂಜಾನ್ ಹಬ್ಬವನ್ನು ತಮ್ಮ ತಮ್ಮ ಮನೆಯಲ್ಲೇ ಆಚರಿಸಿ : ಸಚಿವ ರಮೇಶ ಜಾರಕಿಹೊಳಿ‌ ಮನವಿ

ಬೆಳಗಾವಿ : ಎಲ್ಲೆಡೆ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ದೇಶನದಂತೆ ರಂಜಾನ್ ಹಬ್ಬವನ್ನು ತಮ್ಮ ತಮ್ಮ ಮನೆಯಲ್ಲೇ ಆಚರಿಸಬೇಕು ಮತ್ತು ದೇಶವನ್ನು ಕೊರೋನಾ ಸಂಕಷ್ಟದಿಂದ ಪಾರು ಮಾಡುವಂತೆ ಸಾಮಾಜಿಕ ವ್ಯಕ್ತಿಗತ ಅಂತರ ಕಾಪಾಡಿಕೊಂಡು ರಂಜಾನ್ ಪ್ರಾರ್ಥನೆ ಸಲ್ಲಿಸಬೇಕೆಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ‌ ಮನವಿ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಗತ್ತಿನ ತುಂಬೆಲ್ಲ ಮಹಾಮಾರಿ ಕೊರೋನಾ ವೈರಸ್ ಸೋಂಕು ಕಾಡುತ್ತಿದೆ. ಆದ್ದರಿಂದ ರಂಜಾನ್ ಹಬ್ಬದ ಪ್ರಾರ್ಥನೆಯನ್ನು ಸಾಮೂಹಿಕವಾಗಿ ಆಚರಣೆ ಮಾಡದೆ ತಮ್ಮ, ತಮ್ಮ ಮನೆಯಲ್ಲಿ ಪ್ರಾರ್ಥನೆ ಸಲ್ಲಿಸುವುದರ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸಬೇಕೆಂದು ಕರೆ ನೀಡಿದ್ದಾರೆ.
ಶಾಂತಿ, ಸೌಹಾರ್ದ ಮತ್ತು ‌ಸಹೋದರತ್ವದ ಪ್ರತೀಕರವಾದ ರಂಜಾನ್ ಹಬ್ಬವು ನಾಡಿನ ಜನತೆಗೆ ಸುಖ, ಸಮೃದ್ಧಿಯನ್ನು ತರಲಿ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ‌ ಅವರು ಮುಸ್ಲಿಂ ಬಾಂಧವರೆಲ್ಲರಿಗೂ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯ ಕೋರಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss