Thursday, August 11, 2022

Latest Posts

ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಎಸ್.ಸಿ, ಎಸ್.ಟಿ ಸ್ನಾತಕೋತ್ತರ , ಸಂಶೋಧನಾ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆ

ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪರಿಶಿಷ್ಟ ಜಾತಿ/ಪಂಗಡಗಳ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳಿಗೆ ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆಯಡಿ ಉಚಿತ ಲ್ಯಾಪ್‌ಟಾಪ್ ಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ವಿತರಿಸಿದರು.

ಸುವರ್ಣ ವಿಧಾನಸೌಧದ ಸೆಂಟ್ರಲ್ ಸಭಾಂಗಣದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಲ್ಯಾಪ್‌ಟಾಪ್ ಗಳನ್ನು ವಿದ್ಯಾರ್ಥಿಗಳಿಗೆ ಸಚಿವ ರಮೇಶ ಜಾರಕಿಹೊಳಿ ವಿತರಣೆ ಮಾಡಿದರು.

ಅನಿವಾರ್ಯ ಕಾರಣಗಳಿಂದ ಪದವಿ ಅಪೂರ್ಣಗೊಳಿಸಿದವರಿಗೆ ದಶಮಾನೋತ್ಸವ ಸಂದರ್ಭದಲ್ಲಿ ಪದವಿ ಪೂರ್ಣಗೊಳಿಸಲು ಸುವರ್ಣಾವಕಾಶವನ್ನು ವಿಶ್ವ ವಿದ್ಯಾಲಯ ಒದಗಿಸಲಿದೆ ಎಂದು ಕುಲಪತಿ ಪ್ರೊ.ಎಂ.ರಾಮಚಂದ್ರಗೌಡ ಅವರು ತಿಳಿಸಿದರು.
ಪ್ರಧಾನಮಂತ್ರಿಗಳ ಆಶಯದಂತೆ ಹಾಗೂ ಹೊಸ ಶೈಕ್ಷಣಿಕ ಕೌಶಲ್ಯಾಧಾರಿತ ನೂತನ ಕೋರ್ಸುಗಳನ್ನು ಆರಂಭಿಸಲಾಗುವುದು.
ಲ್ಯಾಪ್‌ಟಾಪ್ ವಿತರಿಸುವ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕ ಅವಕಾಶ ಕಲ್ಪಿಸಲಾಗಿದೆ ಎಂದರು.

ವಿಧಾನಸಭೆ ಉಪಾಧ್ಯಕ್ಷ ಆನಂದ ಮಾಮನಿ, ಜಿಲ್ಲಾ ಪಂಚಾಯತ ಅಧ್ಯಕ್ಷೆ ಆಶಾ ಐಹೊಳೆ, ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಬಾಗಲಕೋಟೆ ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಕುಲಸಚಿವ ಬಸವರಾಜ ಪದ್ಮಸಾಲಿ ಮತ್ತಿತರರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss