ಬೆಂಗಳೂರು: ಬೆಳಗ್ಗೆ ಪತ್ನಿಗೆ ತಲಾಖ್ ನೀಡಿದ ಪತಿ ಅಂದು ಸಂಜೆಯೇ ಪತ್ನಿಯನ್ನು ಕೊಲೆ ಮಾಡಿದ್ದಾನೆ.
ಆರೋಪಿ ಖಲೀಂ ಶರೀಫ್ನ್ನು ಪೊಲೀಸರು ಬಂಧಿಸಿದ್ದಾರೆ. ಜೆಪಿ ನಗರದಲ್ಲಿ ವಾಸವಿದ್ದ ದಂಪತಿ ಆಗಾಗ ಜಗಳವಾಡುತ್ತಿದ್ದರು. ಪತ್ನಿಯ ಶೀಲ ಶಂಕಿಸಿ ಹಾಗೂ ದುಡ್ಡಿನ ವಿಷಯಕ್ಕೆ ಇವರ ಮನೆಯಲ್ಲಿ ನಿತ್ಯ ಜಗಳ ನಡೆಯುತ್ತಿತ್ತು. ಬುಧವಾರ ಬೆಳಗ್ಗೆ ಮಸೀದಿಯಲ್ಲಿ ಪತ್ನಿಗೆ ತಲಾಖ್ ನೀಡಿದ್ದು, ಮನೆಗೆ ಬಂದಮೇಲೆ ಮತ್ತೆ ಜಗಳ ಆರಂಭವಾಗಿದೆ. ಈ ಜಗಳದಲ್ಲಿ ಪತ್ನಿಗೆ ಚಾಕುವಿನಿಂದ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ.