ಬೆಳಗಾವಿ : ಬೆಳೆ ಪರಿಹಾರ ವಿತರಣೆಯಲ್ಲಿ ಯಾವುದೇ ರೀತಿಯ ಅವ್ಯವಹಾರ ನಡೆಯಬಾರದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ಅವರು ಮಂಗಳವಾರ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರೈತರ ಬೆಳೆ ಹಾನಿ ಪರಿಹಾರ ವಿತರಣೆಯಲ್ಲಿ ಹತ್ತು ರೂ. ಅವ್ಯವಹಾರ ನಡೆಯದಂತೆ ಎಚ್ಚರಿಕೆ ನೀಡಲಾಗಿದೆ. ಅವ್ಯವಹಾರ ನಡೆದರೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಯಲ್ಲಿ
ಸಂಭವಿಸಿರುವ ಪ್ರವಾಹದ ಹಾನಿ ಕುರಿತು
ಜನಪ್ರತಿನಿಧಿಗಳೊಂದಿಗೆ ಚರ್ಚಿಸಲಾಗಿದೆ. ವೈಮಾನಿಕ ಸಮೀಕ್ಷೆಯನ್ನು ನಡೆಸಲಾಗುತ್ತಿದೆ. ಬುಧವಾರ ಬೆಂಗಳೂರನಲ್ಲಿ ಅಧಿಕಾರಿಗಳೊಂದಿಗೆ ಸಮಗ್ರವಾಗಿ ಚರ್ಚಿಸಿ ಪರಿಹಾರ ವಿತರಣೆ ಮಾಡಲಾಗುವುದು ಎಂದರು.
ಕೊವೀಡ-19 ಹಿನ್ನಲೆಯಲ್ಲಿ ರಾಜ್ಯದ
ಹಣಕಾಸಿನ ಸ್ಥಿತಿ ಸರಿಯಲ್ಲ.ಯಾವುದೇ ಸರ್ಕಾರಿ ಸಿಬ್ಬಂದಿಗಳ ವೇತನವನ್ನು ಸಹ ನಿಲ್ಲಿಸಿಲ್ಲ. ದೇಶದಲ್ಲೇ ಎಲ್ಲ ಸಿಬ್ಬಂದಿಗಳಿಗೆ ವೇತನ ನೀಡಿದ ರಾಜ್ಯ ಕರ್ನಾಟಕವಾಗಿದೆ.
ಎರಡು ಮೂರು ತಿಂಗಳಲ್ಲಿ ಆರ್ಥಿಕ ಸ್ಥಿತಿ ಸುಧಾರಣೆಯಾಗುವ ಭರವಸೆಯನ್ನು ಸಿಎಂ ಯಡಿಯೂರಪ್ಪ ವ್ಯಕ್ತಪಡಿಸಿದರು.