Saturday, July 2, 2022

Latest Posts

ಬೆಳ್ತಂಗಡಿಯಲ್ಲಿ ‘ಪಾಕ್ ಪರ ಘೋಷಣೆ’ : ‘6 ಎಸ್ ಡಿಪಿಐ ಕಾರ್ಯಕರ್ತ’ರು ಪೊಲೀಸ್ ವಶಕ್ಕೆ

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ ಆರು ಎಸ್‌ಡಿಪಿಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಳ್ತಂಗಡಿ ತಾಲೂಕಿನ ಮತ ಎಣಿಕೆ ಕೇಂದ್ರದ ಬಳಿ ಎಸ್‌ಡಿಪಿಐ ಕಾರ್ಯಕರ್ತರು ಗೆಲುವು ಸಾಧಿಸಿ ಪಾಕಿಸ್ತಾನ್ ಜಿಂದಾಬಾದ್ ಎಂದಿದ್ದಾರೆ.
ಮತ ಎಣಿಕೆ ಸಮಯದಲ್ಲಿ ಉಪಸ್ಥಿತರಿದ್ದ ಕಾರ್ಯಕರ್ತರು ಗೆದ್ದ ಬಳಿಕ ವಿಜಯೋತ್ಸವ ಸಂದರ್ಭದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿದ್ದಾರೆ. ಘೋಷಣೆ ಕೂಗಿದ ಆರು ಮಂದಿಯನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಯುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss