ಹೊಸದಿಗಂತ ಆನ್ ಲೈನ್ ಡೆಸ್ಕ್:
ಬೆಳ್ಳಂಬೆಳಗ್ಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ನೆಲಮಂಗಲ ಟೌನ್ ನಲ್ಲಿ ಲಾರಿ ಚಾಲಕ ಸಡನ್ ಬ್ರೇಕ್ ಹಾಕಿದಾಗ ಲಾರಿಗೆ ಓಮಿನಿ ಡಿಕ್ಕಿ ಹೊಡೆದಿದೆ. ಓಮಿನಿ ಹಿಂದಿದ್ದ ಬೈಕ್ ಸವಾರ ಓಮಿನಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಲಾರಿ ಚಾಲಕ ಒಮ್ಮೆಲೆ ಬ್ರೇಕ್ ಹಾಕಿದ್ದರಿಂದ ವೇಗವಾಗಿದ್ದ ವಾಹನಗಳು ಡಿಕ್ಕಿ ಹೊಡೆದುಕೊಂಡು ಅವಘಡ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ
ಈ ಘಟನೆ ಸಂಬಂಧಿಸಿದಂತೆ ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.