Wednesday, July 6, 2022

Latest Posts

ಬೇಕಲ ಬೀಚ್ ಆಕ್ಸಸ್ ಡೆವೆಲಪ್‌ಮೆಂಟ್ ಆ್ಯಂಡ್ ಬ್ಯೂಟಿಫಿಕೇಷನ್ ಯೋಜನೆ ಉದ್ಘಾಟನೆ

ಹೊಸ ದಿಗಂತ ವರದಿ, ಕಾಸರಗೋಡು:

ಜಗತ್ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಬೇಕಲದಲ್ಲಿ ಪ್ರವಾಸಿಗರಿಗಾಗಿ ಪ್ರತ್ಯೇಕ ಯೋಜನೆಗಳು ಸಿದ್ಧಗೊಂಡಿವೆ.
ಅದರಂತೆ ಪ್ರವಾಸಿಗರ ಪ್ರಯಾಣ ಮತ್ತು ಮೂಲಭೂತ ಸೌಲಭ್ಯ ಸುಧಾರಣೆಗೊಳಿಸುವ ನಿಟ್ಟಿನಲ್ಲಿ ರಚಿಸಲಾದ ಬೇಕಲ ಬೀಚ್ ಆಕ್ಸಸ್ ಡೆವೆಲಪ್‌ಮೆಂಟ್ ಆ್ಯಂಡ್ ಬ್ಯೂಟಿಫಿಕೇಷನ್ ಯೋಜನೆಯು ಉದ್ಘಾಟನೆಗೊಂಡಿತು.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆನ್‌ಲೈನ್ ರೂಪದಲ್ಲಿ ಯೋಜನೆಗೆ ಚಾಲನೆ ನೀಡಿದರು. ಪ್ರವಾಸೋದ್ಯಮ ಸಚಿವ ಕಡಗಂಪಳ್ಳಿ ಸುರೇಂದ್ರನ್ ಅಧ್ಯಕ್ಷತೆ ವಹಿಸಿದ್ದರು. ಸಂಸದ ರಾಜ್‌ ಮೋಹನ್ ಉಣ್ಣಿತ್ತಾನ್ ಮತ್ತು ಜಿ.ಪಂ.ಅಧ್ಯಕ್ಷೆ ಬೇಬಿ ಬಾಲಕೃಷ್ಣನ್ ಮುಖ್ಯ ಅತಿಥಿಗಳಾಗಿದ್ದರು. ಪ್ರವಾಸೋದ್ಯಮ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಣಿ ಜಾರ್ಜ್ ಪ್ರಧಾನ ಭಾಷಣ ಮಾಡಿದರು. ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು, ಕಾಞಂಗಾಡು ಬ್ಲಾಕ್ ಪಂಚಾಯತ್ ಅಧ್ಯಕ್ಷ ಕೆ.ಮಣಿಕಂಠನ್, ಪಳ್ಳಿಕೆರೆ ಗ್ರಾಮ ಪಂಚಾಯತ್
ಅಧ್ಯಕ್ಷ ಕೆ.ಕುಮಾರನ್, ಜಿಲ್ಲಾ ಪಂಚಾಯತ್ ಸದಸ್ಯೆ ಗೀತಾಕೃಷ್ಣನ್ ಮೊದಲಾದವರು ಉಪಸ್ಥಿತರಿದ್ದರು. ಉದುಮ ಶಾಸಕ ಕೆ.ಕುಂಞರಾಮನ್ ಸ್ವಾಗತಿಸಿ, ವಂದಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss