Thursday, August 11, 2022

Latest Posts

ಬೇಗೂರು ಆತ್ಯಾಚಾರ ಪ್ರಕರಣ: ಸೊರಬದಲ್ಲಿ ಯುವ ಮೋರ್ಚಾ ಪ್ರತಿಭಟನೆ, ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹ

ಶಿವಮೊಗ್ಗ: ಧಾರವಾಡ ಜಿಲ್ಲೆಯ ಬೇಗೂರು ಗ್ರಾಮದಲ್ಲಿ ನಡೆದ ಅಪ್ರಾಪ್ತೆಯ ಮೇಲಿನ ಅತ್ಯಾಚಾರ ಹಾಗೂ ಆತ್ಮಹತ್ಯೆ ಕೃತ್ಯಕ್ಕೆ ಕಾರಣನಾದ ಬಶೀರ್‍ಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಸೊರಬ ತಾಲೂಕು ಬಿಜೆಪಿ ಯುವ ಮೋರ್ಚಾ ಘಟಕದಿಂದ ಬುಧವಾರ ಪಟ್ಟಣದ ತಾಲ್ಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ, ಶಿರಸ್ತೆದಾರ್ ಶಿವಪ್ರಸಾದ್ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನಯ್ ಶೆರ್ವಿ ಮೂಡಿ ಮಾತನಾಡಿ, ರಾಮ ರಾಜ್ಯದಲ್ಲಿ ರಾವಣರ ಸಂಹಾರವಾಗಲೇ ಬೇಕಿದೆ. ದೇಶದಲ್ಲಿ ಕಠಿಣ ಕಾನೂನುಗಳು ಜಾರಿಯಲ್ಲಿದ್ದರೂ ಯುವಕನೊಬ್ಬ ದೇವಸ್ಥಾನಕ್ಕೆ ತೆರಳಿದ್ದ ಅಪ್ರಾಪ್ತೆಯ ಮೇಲೆ ಅತ್ಯಾಚಾರ ವೆಸಗಿ, ಆಕೆಯ ಸಾವಿಗೆ ಕಾರಣನಾಗಿದ್ದಾನೆ. ಕೃತ್ಯಕ್ಕೆ ಕಾರಣನಾದ ಯುವಕನನ್ನು ನಿರ್ದಾಕ್ಷಿಣ್ಯವಾಗಿ ಗಲ್ಲಿಗೆ ಏರಿಸಬೇಕು ಎಂದು ಆಗ್ರಹಿಸಿದರು.
ವಸಂತ್ ಶೇಟ್ ಚಂದ್ರಗುತ್ತಿ, ಮಧು ಯಲಸಿ, ವಿನಯ್ ಗುತ್ತೇರ್ ಮಲ್ಲಾಪುರ, ಮಧು ನೆಲ್ಲಿಕೊಪ್ಪ, ಅರುಣ್ ಕುಮಾರ್ ಇತರರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss