Sunday, August 14, 2022

Latest Posts

‘ಬೇಟಿ ಬಚಾವೋ, ಬೇಟಿ ಪಡಾವೋ’ ಯೋಜನೆಯಡಿ ಹೆಣ್ಣುಮಕ್ಕಳ ಶಿಕ್ಷಣಕ್ಕೆ 2 ಲಕ್ಷ ಸಿಗುತ್ತಾ? ಕೇಂದ್ರ ಸರಕಾರ ಹೇಳಿದ್ದೇನು?

ಹೊಸದಿಲ್ಲಿ: ಇಂದು ಒಂದು ವಿಷಯ ಸಿಕ್ಕಿದ್ದರೆ ಸಾಕು ಅದರ ಬಗ್ಗೆ ಮಾಹಿತಿ ಪಡೆಯದೇ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಾರೆ . ಅದ್ರಂತೆ, ಇತ್ತಿಚಿಗೆ ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆಯಡಿ 2 ಲಕ್ಷ ಸಿಗುತ್ತೆ ಎನ್ನುವ ಸುದ್ದಿ ಓಡಾಡುತ್ತಿದೆ. ಆದರೆ ಈ ಸುದ್ದಿಯ ಸತ್ಯಾಸತ್ಯತೆ ಬಗ್ಗೆ ಕೇಂದ್ರ ಸರಕಾರ ಸ್ಪಷ್ಟನೆ ನೀಡಿದೆ .
ಹೌದು, ‘ಹೆಣ್ಣುಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಉತ್ತೇಜನ ನೀಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಶುರು ಮಾಡಿರುವ ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆಯಡಿ ಹೆಣ್ಣುಮಕ್ಕಳಿಗೆ 2 ಲಕ್ಷ ರೂಪಾಯಿಗಳನ್ನು ನೀಡಲಾಗುವುದು’ ಎಂದು ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹರಿದಾಡುತ್ತಿದೆ.
ಆದ್ರೆ, ಇದೊಂದು ಅಪ್ಪಟ ಸುಳ್ಳು ಸುದ್ದಿಯಾಗಿದ್ದು, ಕೇಂದ್ರ ಸರ್ಕಾರವೇ ಇಂತಹ ಯಾವುದೇ ಯೋಜನೆ ಸರ್ಕಾರದಿಂದ ಜಾರಿಯಾಗಿಲ್ಲ ಎಂದು ಸ್ಪಷ್ಟೀಪಡಿಸಿದೆ.
ಈ ಸುದ್ದಿ ನಕಲಿ ಎಂದು ಟ್ವೀಟ್ ಮೂಲಕ ಪಿಐಬಿ ಮಾಹಿತಿ ನೀಡಿದೆ. ಇದು ಸುಳ್ಳು ಸುದ್ದಿ. ಈ ಯೋಜನೆಯಡಿ ಯಾವುದೇ ನಗದು ಪ್ರೋತ್ಸಾಹವನ್ನು ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss