Saturday, August 13, 2022

Latest Posts

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆ.26ರಿಂದ ಪೌರಕಾರ್ಮಿಕರಿಂದ ಮುಷ್ಕರ

ಮೈಸೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆ.೨೬ ರಿಂದ ಸ್ವಚ್ಚತಾ ಕಾರ್ಯವನ್ನು ಸ್ಥಗಿತಗೊಳಿಸಿ, ಮುಷ್ಕರ ನಡೆಸಲು ಪೌರಕಾರ್ಮಿಕರು ನಿರ್ಧರಿಸಿದ್ದಾರೆ.
ಸೋಮವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ನಗರಪಾಲಿಕೆ ಖಾಯಂ ಪೌರಕಾರ್ಮಿಕರ ಹಾಗೂ ಗುತ್ತಿಗೆ ನೌಕರರ ಮಹಾ ಸಂಘದ ರಾಜ್ಯಾಧ್ಯಕ್ಷ ನಾರಾಯಣ, ಕಳೆದ ಮಾರ್ಚ್ ೭ ರಂದು ನೇರಪಾವತಿ ಮತ್ತು ನಗರಪಾಲಿಕೆ ಅನುದಾನದಡಿಯಲ್ಲಿ ಆಯ್ಕೆಯಾಗಿರುವ ಪೌರಕಾರ್ಮಿಕರಿಗೆ, ನಗರಪಾಲಿಕೆ ಕೌನ್ಸಿಲ್ ಅನುಮೋದನೆಯನ್ನು ಪಡೆದು, ಪಾಲಿಕೆ ಮುಖಾಂತರ ನೇರವಾಗಿ ಪೌರಕಾರ್ಮಿಕರ ಬ್ಯಾಂಕ್ ಖಾತೆಗೆ ವೇತನವನ್ನು ಜಮಾ ಮಾಡಬೇಕಿದೆ. ಆದರೆ ಕಳೆದ ೫ ತಿಂಗಳ ಹಿಂದೆಯೇ ಈ ಬಗ್ಗೆ ಆದೇಶವಾಗಿದ್ದರೂ, ಜಿಲ್ಲಾಧಿಕಾರಿಗಳು ಕ್ರಮವಹಿಸದೆ ನಿರ್ಲಕ್ಷö್ಯ ವಹಿಸಿದ್ದಾರೆ. ಈ ಹಿನ್ನಲೆಯಲ್ಲಿ ನಗರಪಾಲಿಕೆಯ ಅಧಿಕಾರಿಗಳು, ಕೌನ್ಸಿಲ್ ವಿರುದ್ಧ ಆ.೨೬ರಿಂದ ಕೆಲಸ ಸ್ಥಗಿತಗೊಳಿಸಿ, ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ತಿಳಿಸಿದರು. ಆಗಸ್ಟ್ನಿಂದಲೇ ೧೫೬೩ ಮಂದಿಗೂ ನೇರಪಾವತಿ ಜಮಾ ಆಗಬೇಕು, ೨೩೧ ಮಂದಿ ಒಳಚರಂಡಿ ಕಾರ್ಮಿಕರಿಗೂ ನೇರ ವೇತನ ನೀಡಲು ಕೌನ್ಸಿಲ್ ಒಪ್ಪಿಗೆ ಪಡೆಯಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಉನ್ನತ ಸಮಿತಿಯ ಅಧ್ಯಕ್ಷ ಮಾರ, ಅಧ್ಯಕ್ಷ ಜಿ.ಮಹದೇವ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಮತ್ತಿತರರು ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss