Friday, July 1, 2022

Latest Posts

ಬೈಕ್‌ನಲ್ಲಿ ಹೋಗುತ್ತಿದ್ದ ವ್ಯಕ್ತಿಯ ಅಡ್ಡಗಟ್ಟಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಹೊಸ ದಿಗಂತ ವರದಿ, ಮೈಸೂರು:

ಬೈಕ್‌ನಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿರುವ ದುಷ್ಕರ್ಮಿಗಳು ದೊಣ್ಣೆಯಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಮೈಸೂರಿನ ಮಂಡಕಳ್ಳಿ ಗ್ರಾಮದ ಸಮೀಪ ಶನಿವಾರ ನಡೆದಿದೆ.
ಮಂಡಕಳ್ಳಿ ಗ್ರಾಮದ ಮರಿಕೋಟೆಗೌಡ (48) ಕೊಲೆಯಾದವ. ಮೈಸೂರಿನ ಮಹದೇವಪುರದಿಂದ ಬೈಕ್‌ನಲ್ಲಿ ಹೋಗುತ್ತಿದ್ದಾಗ ಮಂಡಕಳ್ಳಿಯಿoದ ಮುಕ್ಕಾಲು ಕಿ.ಮೀ ಮುಂದೆ ಇರುವ ಕಾಲುವೆ ಬಳಿ ಬೆಳಗ್ಗೆ 7.30ರ ಸಮಯದಲ್ಲಿ ಅಡ್ಡಗಟ್ಟಿರುವ ದುಷ್ಕರ್ಮಿಗಳು ದೊಣ್ಣೆಗಳಿಂದ ತೀವ್ರವಾಗಿ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸಿ.ಬಿ.ರಿಷ್ಯಂತ್ ಸೇರಿದಂತೆ ಮೈಸೂರು ದಕ್ಷಿಣ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು. ಈ ಸಂಬoಧ ಪ್ರಕರಣ ದಾಖಲಿಸಿಕೊಂಡಿರುವ ಮೈಸೂರು ದಕ್ಷಿಣ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಯಾರು ಹತ್ಯೆ ಮಾಡಿದ್ದಾರೆ ಮತ್ತು ಯಾಕೆ ಹತ್ಯೆ ಮಾಡಿದ್ದಾರೆ ಎಂಬುದು ಇನ್ನು ತಿಳಿದುಬಂದಿಲ್ಲ ಎಂದು ತಿಳಿಸಿರುವ ಪೊಲೀಸರು. ಯಾವುದಾದರೂ ಹಳೆ ವೈಷಮ್ಯ ಇತ್ತಾ, ಹಳೆಯ ದ್ವೇಷಿಗಳು ಇದ್ದರೇ ಎಂಬ ಆಯಾಮದಲ್ಲಿ ತನಿಖೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss